ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ; ಪ್ರಧಾನಿ ವಾಸ್ತವತೆ ಅರಿಯಲಿ: ರಾಹುಲ್ ಗಾಂಧಿ
ನ್ಯಾಯಾಧೀಶರ ನೇಮಕಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ ಹೇಳಿಕೆ ಪ್ರಧಾನಿ ಮೋದಿ ಅವರ ವಾಸ್ತವತೆಯನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.
ನವದೆಹಲಿ: ನ್ಯಾಯಾಧೀಶರನ್ನು ನೇಮಕ ಮಾಡದೆ ಬಾಕಿ ಇರುವ ಪ್ರಕರಣಗಳ ತೀರ್ಪನ್ನು ಶೀಘ್ರವೇ ನೀಡುವಂತೆ ಒತ್ತಡ ಹೇರಬೇಡಿ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಹೇಳಿದ್ದರ ಬಗ್ಗೆ ಮಾತನಾಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸುಪ್ರೀಂ ಕೋರ್ಟ್ ನ ಹೇಳಿಕೆ ಪ್ರಧಾನಿ ಮೋದಿ ಅವರ ವಾಸ್ತವತೆಯನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.
ಟ್ವಿಟರ್ ನಲ್ಲಿ ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವುದು ಪ್ರಧಾನಿ ನರೇಂದ್ರ ಮೋದಿ ಅವರ ರಿಯಾಲಿಟಿ ಚೆಕ್ ಆಗಿದೆ ಎಂದು ಟೀಕಿಸಿದ್ದಾರೆ. ನ್ಯಾಯಾಧೀಶರ ನೇಮಕದಲ್ಲಿ ವಿಳಂಬ ನೀತಿಯನ್ನು ಅನುಸರಿಸುತ್ತಿರುವುದಕ್ಕೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್, ಫೆಬ್ರವರಿಯಿಂದ ಹೈಕೋರ್ಟ್ ನ್ಯಾಯಾಧೀಶರ ಹುದ್ದೆಗೆ 75 ಜಡ್ಜ್ ಗಳನ್ನೂ ಶಿಫಾರಸ್ಸು ಮಾಡಲಾಗಿದ್ದರೂ ಈ ವರೆಗೂ ಒಂದೇ ಒಂದು ಹೆಸರನ್ನು ಅಂಗೀಕರಿಸಲಾಗಿಲ್ಲ. ಅಷ್ಟೇ ಅಲ್ಲದೆ, ಕೊಲಿಜಿಯಂ ನಿಂದ ವರ್ಗಾವಣೆ ಮಾಡಲಾಗಿರುವ ನ್ಯಾಯಾಧೀಶರನ್ನು ಸಹ ವರ್ಗಾವಣೆ ಮಾಡಲಾಗಿಲ್ಲ ಸರ್ಕಾರಕ್ಕೆ ಒಂದಷ್ಟು ಹೊಣೆಗಾರಿಕೆ ಇರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿತ್ತು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.