ದೇಶ

ಪ್ಲಾಸ್ಟಿಕ್ ಧ್ವಜಗಳನ್ನು ಗೌರವಯುತವಾಗಿ ವಿಲೇವಾರಿ ಮಾಡಿ: ಕೇಂದ್ರ ಸೂಚನೆ

Shilpa D

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯಂದು ಪ್ಲಾಸ್ಟಿಕ್ ಧ್ವಜಗಳನ್ನು ಬಳಸುವಂತಿಲ್ಲ ಮತ್ತು ಪೇಪರ್ ಧ್ವಜಗಳನ್ನು ಬಳಸಿ ಎಲ್ಲೆಂದರಲ್ಲಿ ಎಸೆಯುವಂತಿಲ್ಲ, ಗೌರವಯುತವಾಗಿ ಅವುಗಳನ್ನು ವಿಲೇವಾರಿ ಮಾಡಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಎಲ್ಲಾ ರಾಜ್ಯಗಳಿಗೆ  ಹಾಗೂ ಕೇಂದ್ರಾಡಳಿತ ಪ್ರದೇಶ ಮತ್ತು ಸರ್ಕಾರಿ ಸಚಿವಾಲಯಗಳಿಗೆ ಕಟ್ಟುನಿಟ್ಟಿನ ಆಜ್ಞೆ ಮಾಡಿದೆ.

ಪಾಸ್ಟಿಕ್ ಹಾಗೂ ಪೇಪರ್ ಬಾವುಟಗಳು ರಾಜ್ಯಗಳಲ್ಲಿ ಉತ್ಪಾದನೆ ಮಾಡದ ಹಾಗೆ ಸ್ಥಳೀಯ ಸರ್ಕಾರಗಳು ಕ್ರಮಕೈಗೊಳ್ಳಬೇಕು. ಜತೆಗೆ ಈ ವಿಚಾರವಾಗಿ ಜನತೆಯಲ್ಲಿ ಅರಿವು ಮೂಡಿಸಬೇಕಾದ ಅಗತ್ಯತೆಯಿದೆ.

ಪ್ಲಾಗ್ ಕೋಡ್ ಇಂಡಿಯಾ 2002 ಹಾಗೂ ರಾಷ್ಟ್ರೀಯ ಮನ್ನಣೆ ಕಾಯಿದೆ ಅನ್ವಯ ದೇಶದ ಬಾವುಟಕ್ಕೆ ಅಗೌರವ ತೋರುವುದು ಶಿಕ್ಷಾರ್ಹ ಅಪರಾಧವಾಗುತ್ತದೆ. ರಾಷ್ಟ್ರ ಧ್ವಜಕ್ಕೆ ಅಗೌರವ ತಡೆಯುವ ಸಲುವಾಗಿ ಈ ಕ್ರಮಕ್ಕೆ ಮುಂದಾಗಲಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.

SCROLL FOR NEXT