ಸಂಗ್ರಹ ಚಿತ್ರ 
ದೇಶ

ನೌಹಟ್ಟಾ ದಾಳಿ: 2 ಉಗ್ರರನ್ನು ಸದೆ ಬಡಿದ ಯೋಧರು, 1 ಸಿಆರ್'ಪಿಎಫ್ ಅಧಿಕಾರಿ ಹುತಾತ್ಮ

ಶ್ರೀನಗರದ ನೌಹಟ್ಟಾ ಪ್ರದೇಶದಲ್ಲಿನ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಧರು ಇಬ್ಬರು ಉಗ್ರರನ್ನು ಸದೆಬಡಿದಿದ್ದು, ಘಟನೆ ವೇಳೆ ಓರ್ವ ಸಿಆರ್ ಪಿಎಫ್ ಅಧಿಕಾರಿಯೊಬ್ಬರು ಹುತಾತ್ಮರಾಗಿರುವುದಾಗಿ...

ಶ್ರೀನಗರ: ಶ್ರೀನಗರದ ನೌಹಟ್ಟಾ ಪ್ರದೇಶದಲ್ಲಿನ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಧರು ಇಬ್ಬರು ಉಗ್ರರನ್ನು ಸದೆಬಡಿದಿದ್ದು, ಘಟನೆ ವೇಳೆ ಓರ್ವ ಸಿಆರ್ ಪಿಎಫ್ ಅಧಿಕಾರಿಯೊಬ್ಬರು ಹುತಾತ್ಮರಾಗಿರುವುದಾಗಿ ಸೋಮವಾರ ತಿಳಿದುಬಂದಿದೆ.

ಸೇನಾ ಸಿಬ್ಬಂದಿಗಳನ್ನು ಗುರಿಯಾಗಿರಿಸಿಕೊಂಡು ಉಗ್ರರು ಇಂದು ಬೆಳಿಗ್ಗೆ ಗುಂಡಿನ ದಾಳಿ ನಡೆಸುತ್ತಿದ್ದರು. ಇದರಂತೆ ಉಗ್ರರನ್ನು ಹೊಡೆದುರುಳಿಸುವ ಸಲುವಾಗಿ ಕಾರ್ಯಾಚರಣೆ ಆರಂಭಿಸಲಾಗಿತ್ತು. ಇದೀಗ ಯೋಧರು ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ.

ಈಗಲೂ ಸ್ಥಳದಲ್ಲಿ ಗುಂಡಿನ ದಾಳಿ ಶಬ್ಧಗಳು ಕೇಳಿಬರುತ್ತಿದ್ದು, ಸ್ಥಳದಲ್ಲಿ ಇನ್ನು ಎರಡರಿಂದ ಮೂವರು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೇನಾ ಪಡೆ ಕಾರ್ಯಾಚರಣೆಯನ್ನು ಮುಂದುವರೆಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇದರಂತೆ ಉತ್ತರ ಕಾಶ್ಮೀರದ ಬರಾಮುಲ್ಲಾ ಜಿಲ್ಲೆಯ ಉರಿವಲಯದಲ್ಲೂ ಅತಿಕ್ರಮಣಕ್ಕೆ ಯತ್ನಿಸಿದ ಇಬ್ಬರು ಉಗ್ರರನ್ನು ಸೇನಾ ಪಡೆ ಗುಂಡಿಕ್ಕಿ ಹತ್ಯೆ ಮಾಡಿದೆ. ಗಡಿ ಪ್ರದೇಶಗಳಲ್ಲಿ ದೇಶದೊಳಗೆ ನುಗ್ಗಿ ಸ್ವಾತಂತ್ರ್ಯ ದಿನಾಚರಣೆಯನ್ನು ವಿಧ್ವಸಂಕ ಕೃತ್ಯಕ್ಕೆ ಉಗ್ರರು ಸಂಚು ರೂಪಿಸುತ್ತಿದ್ದು, ಎಲ್ಲೆಡೆ ಈಗಾಗಲೇ ಕಟ್ಟೆಚ್ಚರ ವಹಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!