ಮಾಜಿ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್ 
ದೇಶ

ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಬಲೂಚಿಸ್ತಾನದ ಪ್ರಸ್ತಾಪ: ಮೋದಿ ವಿರುದ್ಧ ಕಾಂಗ್ರೆಸ್ ಅಸಮಾಧಾನ

ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಲೂಚಿಸ್ತಾನ ವಿಷಯವನ್ನು ಪ್ರಸ್ತಾಪಿಸಿದ್ದಕ್ಕೆ ಮಾಜಿ ವಿದೇಶಾಂಗ ಸಚಿವ, ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅಸಮಾಧಾನ...

ನವದೆಹಲಿ:ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಲೂಚಿಸ್ತಾನ ವಿಷಯವನ್ನು ಪ್ರಸ್ತಾಪಿಸಿದ್ದಕ್ಕೆ ಮಾಜಿ ವಿದೇಶಾಂಗ ಸಚಿವ, ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಬಲೂಚಿಸ್ತಾನ ವಿಷಯವನ್ನು ಪ್ರಸ್ತಾಪಿಸಿರುವುದು, ಭಾರತದ ಆಂತರಿಕ ವಿಷಯಗಳಲ್ಲಿ ಮೂಗು ತೂರಿಸುವುದಕ್ಕೆ ಪಾಕಿಸ್ತಾನಕ್ಕೆ ಅವಕಾಶ ನೀಡಿದಂತಾಗುತ್ತದೆ ಎಂದು ಸಲ್ಮಾನ್ ಖುರ್ಷಿದ್ ಅಭಿಪ್ರಾಯಪಟ್ಟಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದ ವಿಷಯ ಬಲೂಚಿಸ್ತಾನದ ವಿಷಯಕ್ಕಿಂತ ಭಿನ್ನವಾದದ್ದು, ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಮಾತನಾಡಲು ಭಾರತಕ್ಕೆ ಸಂಪೂರ್ಣ ಹಕ್ಕಿದೆ. ಆದರೆ ಬಲೂಚಿಸ್ತಾನದ ಬಗ್ಗೆ ಮಾತನಾಡಲು ಅದು ನಮ್ಮ ವಿಷಯವಲ್ಲ ಎಂದು ಖುರ್ಷಿದ್ ಹೇಳಿದ್ದಾರೆ. ಬಲೂಚಿಸ್ತಾನ ಪಾಕಿಸ್ತಾನದ ಆಂತರಿಕ ವಿಷಯ. ಅದು ಸಾರ್ವಭೌಮ ರಾಷ್ಟ್ರದ ಆಂತರಿಕ ಪ್ರಶ್ನೆಯಾಗಿರುವುದರಿಂದ ನಾವು ಸಂಯಮದಿಂದ ಇರುವ ಅಗತ್ಯವಿದೆ ಎಂದು ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೆ ಗ್ರಾಹಕರಿಗೆ ಶಾಕ್: ಪೆಟ್ರೋಲ್, ಡೀಸೆಲ್ ದರ 5 ದಿನಗಳಲ್ಲಿ ಎರಡನೇ ಬಾರಿ ಏರಿಕೆ

ರಾಜ್ಯ ಸರ್ಕಾರಕ್ಕೆ ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಾಧನ ಸಮಾವೇಶ: ಗಿನ್ನೆಸ್ ದಾಖಲೆಗೆ ತುಮಕೂರು ಸಜ್ಜು!

ಗಲ್ಫ್ ರಾಷ್ಟ್ರಗಳ ಮನವಿ: ಇರಾನ್ ಮೇಲಿನ ದಾಳಿ ಮುಂದೂಡಿದ ಡೊನಾಲ್ಡ್ ಟ್ರಂಪ್

IPL 2026 Playoffs Scenarios: ಅಗ್ರಸ್ಥಾನದಲ್ಲಿ ಆರ್ ಸಿಬಿ, 4ನೇ ಸ್ಥಾನಕ್ಕಾಗಿ 5 ತಂಡಗಳ ನಡುವೆ ಪೈಪೋಟಿ!

IPL 2026: ಸನ್ ರೈಸರ್ಸ್ ವಿರುದ್ಧ ಗೆದ್ದ ಬಳಿಕ 'ವಿಸಿಲ್ ಪೋಡು' ಮೂಲಕ CSK ಅಭಿಮಾನಿಗಳನ್ನು ಕೆಣಕಿದ ಇಶಾನ್ ಕಿಶನ್! Video

SCROLL FOR NEXT