ಸಾಂದರ್ಭಿಕ ಚಿತ್ರ 
ದೇಶ

ಮನೆ ಮೇಲೆ ಪಾಕ್ ಧ್ವಜ ಹಾರಿಸಿದ ಸ್ವಾತಂತ್ರ್ಯ ಹೋರಾಟಗಾರನ ಮೊಮ್ಮಗ

ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಮೊಮ್ಮಗ ತನ್ನ ಮನೆಯ ಮಹಡಿ ಮೇಲೆ ಪಾಕಿಸ್ತಾನಿ ಧ್ವಜ ಹಾರಿಸಿದ ಆರೋಪದ ಮೇರೆಗೆ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.

ಜೈಪುರ: ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಮೊಮ್ಮಗ ತನ್ನ ಮನೆಯ ಮಹಡಿ ಮೇಲೆ ಪಾಕಿಸ್ತಾನಿ ಧ್ವಜ ಹಾರಿಸಿದ ಆರೋಪದ ಮೇರೆಗೆ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.

ರಾಜಸ್ತಾನದ ಜೈಪುರದ ಮಾನ್ಸರೋವರ ಎಂಬಲ್ಲಿ ಈ ಘಟನೆ ನಡೆದಿದ್ದು, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಅನಿನ್ ಜೈಮಿನಿ ಎಂಬುವವರ ಮೊಮ್ಮಗ ಕಪಿಲ್ ಶಾಸ್ತ್ರಿ ತನ್ನ ಮನೆ ಮಹಡಿಯ  ಮೇಲೆ ಪಾಕಿಸ್ತಾನ ಧ್ವಜವನ್ನು ಹಾರಿಸಿ ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿದ್ದಾನೆ. ಪಾಕಿಸ್ತಾನ ಧ್ವಜ ಕಾಣಿಸಿಕೊಳ್ಳುತ್ತಿದ್ದಂತೆಯೇ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದು, ಸ್ಥಳಕ್ಕಾಗಮಿಸಿದ  ಪೊಲೀಸರು ಕಪಿಲ್ ಶಾಸ್ತ್ರಿಯನ್ನು ವಿಚಾರಣೆ ನಡೆಸಿದ್ದಾರೆ.

ಈ ವೇಳೆ ಆತನ ಪೋಷಕರು ಕಪಿಲ್ ಶಾಸ್ತ್ರಿ ಓರ್ವ ಮಾನಸಿಕ ಅಸ್ವಸ್ಥ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಬಳಿಕ ಕಪಿಲ್ ಶಾಸ್ತ್ರಿ ಬಿಟ್ಟಿರುವ ಪೊಲೀಸರು ನಾಳೆ ಆತನನ್ನು ವೈದ್ಯಕೀಯ ಪರೀಕ್ಷೆಗೆ  ಒಳಪಡಿಸುವುದಾಗಿ ಹೇಳಿದ್ದಾರೆ.

ಅಂತೆಯೇ ಆತನ ವಿರುದ್ಧ ವಿವಿಧ ಧರ್ಮ, ಗುಂಪುಗಳ ನಡುವೆ ದ್ವೇಷ ಭಾವವನ್ನು ಪ್ರಚೋಧಿಸಿದ ಆಧಾರದಲ್ಲಿ ಐಪಿಸಿ ಸೆಕ್ಷನ್ 153ಎ ಹಾಗೂ 295ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ನಾಳೆ  ಕಪಿಲ್ ಶಾಸ್ತ್ರಿಯ ವೈದ್ಯಕೀಯ ಪರೀಕ್ಷಾ ವರದಿ ಬಂದ ಬಳಿಕ ಆತ ಮಾನಸಿಕ ಅಸ್ವಸ್ಥನೋ ಇಲ್ಲವೋ ಎಂಬ ವಿಚಾರ ತಿಳಿಯಲಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ  ಪೊಲೀಸರು ತಿಳಿಸಿದ್ದಾರೆ.

ಇನ್ನು ಪ್ರಾಥಮಿಕ ಮಾಹಿತಿಯ ಪ್ರಕಾರ ಮಾನಸಿಕ ಅಸ್ವಸ್ಥ ಕಪಿಲ್ ಶಾಸ್ತ್ರಿ ಕೆಲ ವರ್ಷಗಳ ಹಿಂದೆ ಸಮೀಪದ ಗಲ್ಲಿಯೊಂದರಿಂದ ಪಾಕ್ ಧ್ವಜವನ್ನು ತಂದಿದ್ದು, ಇಂದು ಅದನ್ನು ಮಹಡಿ ಮೇಲೆ  ಹಾರಿಸಿದ್ದಾನೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್