ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ 
ದೇಶ

ಕಾಶ್ಮೀರ ಹಿಂಸಾಚಾರ: ಬಂದೂಕುಗಳು ನಮಗೆ ನ್ಯಾಯ ಕೊಡಿಸುವುದಿಲ್ಲ: ಮೆಹಬೂಬಾ ಮುಫ್ತಿ

ವಿವಾದಿತ ಕಾಶ್ಮೀರದ ವಿಚಾರದಲ್ಲಿ ಪಾಕಿಸ್ತಾನ ಸರ್ಕಾರ ಭಾರತದೊಂದಿಗೆ ಚರ್ಚೆ ನಡೆಸುವ ಅಗತ್ಯವಿದ್ದು, ಭಾರತದ ಗಡಿಯಲ್ಲಿ ಗುಂಡಿನ ದಾಳಿ ನಡೆಸುವುದರಿಂದ ಅವರಿಗೆ ನ್ಯಾಯ ಸಿಗುವುದಿಲ್ಲ...

ನವದೆಹಲಿ: ವಿವಾದಿತ ಕಾಶ್ಮೀರದ ವಿಚಾರದಲ್ಲಿ ಪಾಕಿಸ್ತಾನ ಸರ್ಕಾರ ಭಾರತದೊಂದಿಗೆ ಚರ್ಚೆ ನಡೆಸುವ ಅಗತ್ಯವಿದ್ದು, ಭಾರತದ ಗಡಿಯಲ್ಲಿ ಗುಂಡಿನ ದಾಳಿ ನಡೆಸುವುದರಿಂದ ಅವರಿಗೆ ನ್ಯಾಯ ಸಿಗುವುದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಸೋಮವಾರ ಹೇಳಿದ್ದಾರೆ.

70ನೇ ಸ್ವಾತಂತ್ರ್ಯೋತ್ಸವ ದಿನದ ಹಿನ್ನೆಲೆಯಲ್ಲಿ ಶ್ರೀನಗರದ ಬಕ್ಷಿ ಸ್ಟೇಡಿಯಂನಲ್ಲಿ ಧ್ವಜಾರೋಹಣ ಮಾಡಿದ ಬಳಿಕ ಮಾತನಾಡಿರುವ ಅವರು, ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನ ಭಾರತದೊಂದಿಗೆ ಚರ್ಚೆ ನಡೆಸುವ ಆಗತ್ಯವಿದೆ. ಬಂದೂಕುಗಳಿಂದ ಗುಂಡು ಹಾರಿಸುವುದರಿಂದ, ದಾಳಿ ಮಾಡುವುದರಿಂದ ಯಾವುದೇ ರೀತಿಯ ನ್ಯಾಯ ಸಿಗುವುದಿಲ್ಲ. ಜಮ್ಮು ಮತ್ತು ಕಾಶ್ಮೀರ ಅಥವಾ ಭಾರತದ ವತಿಯಿಂದ ಸಮಸ್ಯೆಗಳುಂಟಾಗುತ್ತಿಲ್ಲ. ರಾಜ್ಯದಲ್ಲಿರುವ ನಾಯಕತ್ವದಿಂದ ಹಲವು ವರ್ಷಗಳಿಂದಲೂ ಸಮಸ್ಯೆಗಳು ಉದ್ಭವಗೊಳ್ಳುತ್ತಾ ಬಂದಿದೆ ಎಂದು ಹೇಳಿದ್ದಾರೆ.

ಜವಾಹರ್ ಲಾಲ್ ನೆಹರು ಅವರ ಕಾಲದಿಂದ ಇಂದಿನ ವರೆಗೂ ಬೆಳೆದು ಬಂದಿರುವ ರಾಷ್ಟ್ರೀಯ ನಾಯಕತ್ವವೇ ಇಂದು ಉಲ್ಭಣಗೊಂಡಿರುವ ಸಮಸ್ಯೆಗೆ ಜವಾಬ್ದಾರಿಯಾಗಿದೆ ಎಂದು ಆರೋಪಿಸಿದ್ದಾರೆ.

ಕಾಶ್ಮೀರದಲ್ಲಿ ಎನ್ ಕೌಂಟರ್ ಗಳು ಕಳೆದ ಹಲವು ವರ್ಷಗಳಿಂದಲೂ ನಡೆದುಕೊಂಡು ಬಂದಿದೆ. ಇದು ಇಂದಿಗೂ ನಡೆಯುತ್ತಲೇ ಇದೆ. ಇದರಲ್ಲಿ ನಮ್ಮ ಸರ್ಕಾರದ ತಪ್ಪೇನು ಎಂಬುದು ಈವರೆಗೂ ನನಗೆ ಅರ್ಥವಾಗುತ್ತಿಲ್ಲ. ಇತ್ತೀಚೆಗೆ ರಾಜ್ಯದಲ್ಲಿ ನಡೆದ ಬೆಳವಣಿಗೆಯಲ್ಲಿ ನನ್ನ ನಿರ್ದೇಶನದ ವಿರುದ್ಧ ನಡೆದುಕೊಂಡ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ವಿರುದ್ಧ ನಾನು ಕೂಡಲೇ ಕಠಿಣ ಕೈಗೊಳ್ಳುತ್ತೇನೆ.

ಇಂದು ನಾನು ನನ್ನ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ನೆನೆಸಿಕೊಳ್ಳಲು ಇಚ್ಛಿಸುತ್ತೇನೆ. ವಾಜಪೇಯಿ ಅವರ ಅಧಿಕಾರಾವಧಿಯಲ್ಲಿ ಪಡಲಾಗಿದ್ದ ಶ್ರಮವು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಧಿಕಾರಾವಧಿಯಲ್ಲಿ ಪೂರ್ಣಗೊಳ್ಳಲಿದೆ ಎಂದು ನಾವು ನಂಬಿದ್ದೇವೆ.

ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಕೂಡಲೇ ನಿಲ್ಲಿಸಿ. ವಿಶ್ವದ ದೊಡ್ಡ ಪ್ರಜಾಪ್ರಭುತ್ವವಾದ ನಮ್ಮ  ರಾಷ್ಟ್ರದಲ್ಲಿಯೇ ನಾವು ನಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳದೇ ಇದ್ದಲ್ಲಿ, ಬೇರೆಲ್ಲಿಯೂ ನಾವು ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ ಎಂದು ಕಾಶ್ಮೀರ ಜನತೆಗೆ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!