ಪ್ರಧಾನಿ ಮೋದಿ 
ದೇಶ

ಬಲೂಚಿಸ್ತಾನಕ್ಕಾಗಿ ಮೋದಿ ಕಾಶ್ಮೀರವನ್ನ ತ್ಯಾಗ ಮಾಡುತ್ತಾರಾ? ಕಾಂಗ್ರೆಸ್ ಪ್ರಶ್ನೆ

ಬಲೂಚಿಸ್ತಾನದ ಬಗ್ಗೆ ಪ್ರಸ್ತಾಪಿಸಿರುವುದಕ್ಕೆ ಅಸಮಾಧಾನ ವ್ಯಕ್ತ ಪಡಿಸಿರುವ ಕಾಂಗ್ರೆಸ್, ಬಲೂಚಿಸ್ತಾನಕ್ಕಾಗಿ ಮೋದಿ ಕಾಶ್ಮೀರವನ್ನು ತ್ಯಾಗ ಮಾಡಲಿದ್ದಾರೆಯೇ

ಮುಂಬಯಿ: 70 ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದ ಭಾಷಣದ ವೇಳೆ ಪ್ರಧಾನಿ ನರೇಂದ್ರ ಮೋದಿ ಬಲೂಚಿಸ್ತಾನದ ಬಗ್ಗೆ ಪ್ರಸ್ತಾಪಿಸಿರುವುದಕ್ಕೆ ಅಸಮಾಧಾನ ವ್ಯಕ್ತ ಪಡಿಸಿರುವ ಕಾಂಗ್ರೆಸ್, ಬಲೂಚಿಸ್ತಾನಕ್ಕಾಗಿ ಮೋದಿ ಕಾಶ್ಮೀರವನ್ನು ತ್ಯಾಗ ಮಾಡಲಿದ್ದಾರೆಯೇ ಎಂದು ಪ್ರಶ್ನಿಸಿದೆ.

ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರದ ಜೊತೆ ಬಲೂಚಿಸ್ತಾನವನ್ನು ಹೋಲಿಕೆ ಮಾಡುತ್ತಿರುವುದಕ್ಕೆ  ಆಶ್ಚರ್ಯ ವ್ಯಕ್ತ ಪಡಿಸಿರುವ ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮಾ, ಎರಡು ಸಮಸ್ಯೆಗಳನ್ನು ಒಟ್ಟೊಟ್ಟಿಗೆ ಕೊಂಡೊಯ್ಯುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ರಧಾನಿ ಮೋದಿ ಪ್ರತಿಬಾರಿ ಕಾಶ್ಮೀರ ವಿಷಯ ಮಾತನಾಡುವಾಗ ಅದರ ಜೊತೆಗೆ ಬಲೂಚಿಸ್ತಾನ ವಿಷಯವನ್ನು ಪ್ರಸ್ತಾಪಿಸುತ್ತಾರೆ. ಇದು ಕಾಳಜಿ ವಹಿಸುವಂತಹ ವಿಚಾರವೇ ಎಂದು ಪ್ರಶ್ನಿಸಿರುವ ಅವರು ವಾಸ್ತವವಾಗಿ ಇದೊಂದು ಭಯ ಹುಟ್ಟಿಸುವ ವಿಷಯವಾಗಿದೆ ಎಂದು ಹೇಳಿದ್ದಾರೆ.

ಕಾಶ್ಮೀರ ವಿವಾದವನ್ನು ಬಲೂಚಿಸ್ತಾನದ ಜೊತೆ ಹೋಲಿಕೆ ಮಾಡುವುದು ಸರಿಯಲ್ಲ. ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಮೋದಿ ಕಾಶ್ಮೀರವನ್ನು ತ್ಯಾಗ ಮಾಡಲು ಮುಂದಾಗಿದ್ದಾರೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ