ಮನೋಹರ್ ಪರಿಕ್ಕರ್ 
ದೇಶ

ಪಾಕಿಸ್ತಾನಕ್ಕೆ ಹೋಗುವುದು, ನರಕಕ್ಕೆ ಹೋಗುವುದು ಎರಡೂ ಒಂದೇ: ಪರಿಕ್ಕರ್

ಬಲೂಚಿಸ್ತಾನ ಸ್ವತಂತ್ರ್ಯವಾಗಲು ಪ್ರಧಾನಿ ಮೋದಿ ತಮ್ಮ ಬೆಂಬಲ ವ್ಯಕ್ತ ಪಡಿಸಿದ ಬೆನ್ನಲ್ಲೇ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಪಾಕಿಸ್ತಾನ ದೇಶವನ್ನು ನರಕಕ್ಕೆ ...

ನವದೆಹಲಿ: ಬಲೂಚಿಸ್ತಾನ ಸ್ವತಂತ್ರ್ಯವಾಗಲು ಪ್ರಧಾನಿ ಮೋದಿ ತಮ್ಮ ಬೆಂಬಲ ವ್ಯಕ್ತ ಪಡಿಸಿದ ಬೆನ್ನಲ್ಲೇ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಪಾಕಿಸ್ತಾನ ದೇಶವನ್ನು ನರಕಕ್ಕೆ ಹೋಲಿಸಿದ್ದಾರೆ.

ಪಾಕಿಸ್ತಾನಕ್ಕೆ ಹೋಗುವುದು, ನರಕಕ್ಕೆ ಹೋಗುವುದು ಎರಡೂ ಒಂದೇ ಎಂದು ಹೇಳಿರುವ ಮನೋಹರ್ ಪರಿಕ್ಕರ್ ವ್ಯಂಗ್ಯವಾಡಿದ್ದಾರೆ.ಪಾಕಿಸ್ತಾನ ದೊಡ್ಡ ಗಾಯಗಳನ್ನು ಸರಿ ಮಾಡುವ ಬದಲು ಸಣ್ಣ ಸಣ್ಣ ಗಾಯಗಳತ್ತ ಗಮನ ಹರಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಕಾಶ್ಮೀರ ಮತ್ತು ಬಲೂಚಿಸ್ತಾನವನ್ನು ಪಾಕಿಸ್ತಾನ ತುಳಿಯಲು ಆಗುವುದಿಲ್ಲ ಎಂದು ನಿನ್ನೆಯಷ್ಟೇ ಪ್ರಧಾನಿ ಮೋದಿ ಹೇಳಿಕೆ ನೀಡಿದ್ದರು. ಇದಾದ ನಂತರ ಪ್ರತಿಕ್ರಿಯೆ ನೀಡಿದ್ದ ಪಾಕಿಸ್ತಾನ ವಿದೇಶಾಂಗ ವ್ಯವಾರಗಳ ಸಲಹೆಗಾರ ಸರ್ತಾಜ್ ಅಜೀಜ್ , ಕಾಶ್ಮೀರ ಸಮಸ್ಯೆಯಿಂದ ಪ್ರಪಂಚದ ಗಮನವನ್ನು ಬೇರೆಡೆ ತಿರುಗಿಸಲು ಬಲೂಚಿಸ್ತಾನ ವಿಷಯವನ್ನು ಮಧ್ಯೆ ತರುತ್ತಿದ್ದಾರೆ ಎಂದು ದೂರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ