ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಸಂಚಾರಿ ನಿಯಮ ಉಲ್ಲಂಘನೆ: ಹೆಲ್ಮೆಟ್ ಧರಿಸಿದೇ ಸ್ಕೂಟರ್ ಓಡಿಸಿದ ವಿಕೆ ಸಿಂಗ್

ಸ್ವಾತಂತ್ರ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಗಾಜಿಯಾಬಾದ್ ನಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ತಿರಂಗ ಯಾತ್ರಾದಲ್ಲಿ ವಿದೇಶಾಂಗ ರಾಜ್ಯ ಸಚಿವ ವಿಕೆ ಸಿಂಗ್ ಹೆಲ್ಮಟ್...

ವಿಕೆ ಸಿಂಗ್
Vishwanath S
Updated On : 16 Aug 2016, 4:08 am

ಗಾಜಿಯಾಬಾದ್: ಸ್ವಾತಂತ್ರ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಗಾಜಿಯಾಬಾದ್ ನಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ತಿರಂಗ ಯಾತ್ರಾದಲ್ಲಿ ವಿದೇಶಾಂಗ ರಾಜ್ಯ ಸಚಿವ ವಿಕೆ ಸಿಂಗ್ ಹೆಲ್ಮಟ್ ಧರಿಸದೇ ಸ್ಕೂಟರ್ ಚಲಾಯಿಸಿ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.

ಸಚಿವರು ಸಂಚಾರಿ ನಿಯಮ ಉಲ್ಲಂಘನೆ ಮಾಡಿರುವುದಕ್ಕೆ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಕೆ ಸಿಂಗ್ ಅವರು ಸ್ಕೂಟರ್ ನಲ್ಲಿ ಹೆಲ್ಮೆಟ್ ಧರಿಸದೇ ಹಿಂಬದಿಯಲ್ಲಿ ಇನ್ನೊಬ್ಬರನ್ನು ಕೂರಿಸಿಕೊಂಡು ಓಡಿಸಿದ್ದಾರೆ.

ಈ ಮೆರವಣಿಗೆ ವೇಳೆ ಸಿಂಗ್ ಜತೆ ಸಾಕಷ್ಟು ಬಿಜೆಪಿ ಕಾರ್ಯಕರ್ತರೂ ಪಾಲ್ಗೊಂಡಿದ್ದರು. ಸ್ಥಳದಲ್ಲಿ ಪೊಲೀಸರು ಇದ್ದರೂ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments