ಬಿಹಾರ: ರಾತ್ರೋರಾತ್ರಿ 11 ಮಂದಿ ನಿಗೂಢ ಸಾವು, ತನಿಖೆಗೆ ಆಗ್ರಹ
ಬಿಹಾರದ ಗೋಪಾಲ್ ಗಂಜ್ ನಲ್ಲಿ ರಾತ್ರೋರಾತ್ರಿ ಸುಮಾರು 11 ಮಂದಿ ನಿಗೂಢವಾಗಿ ಸಾವನ್ನಪ್ಪಿದ್ದು, ಸರ್ಕಾರ ಈ ಪ್ರಕರಣವನ್ನು ತನಿಖೆಗೆ ವಹಿಸಿದೆ...
ಪಾಟ್ನಾ: ಬಿಹಾರದ ಗೋಪಾಲ್ ಗಂಜ್ ನಲ್ಲಿ ರಾತ್ರೋರಾತ್ರಿ ಸುಮಾರು 11 ಮಂದಿ ನಿಗೂಢವಾಗಿ ಸಾವನ್ನಪ್ಪಿದ್ದು, ಸರ್ಕಾರ ಈ ಪ್ರಕರಣವನ್ನು ತನಿಖೆಗೆ ವಹಿಸಿದೆ.
ತೀವ್ರವಾಗಿ ಅಸ್ವಸ್ಥಗೊಂಡಿರುವ ಇನ್ನು ಐದು ಮಂದಿಯನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರೆಲ್ಲರೂ ನೋನಿಯಾ ಟೋಲಾ ಗ್ರಾಮದವರಾಗಿದ್ದು, ಆರ್ಥಿಕವಾಗಿ ತೀರಾ ಹಿಂದುಳಿದ ಕುಟುಂಬದವರಾಗಿದ್ದಾರೆ.
ಮಂಗಳವಾರ ಸಂಜೆ ದೇಸಿ ಮದ್ಯ ಸೇವಿಸಿದ ಮೇಲೆ ಎಲ್ಲರೂ ವಾಂತಿ ಹಾಗೂ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಉಸಿರಾಟದ ತೊಂದರೆ ಉಂಟಾದಾಗ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಯಾವ ಕಾರಣದಿಂದ ಸತ್ತಿದ್ದಾರೆ ಎಂದು ಈಗಲೇ ಏನು ಹೇಳಲಾಗುವುದಿಲ್ಲ ಎಂದು ಹೇಳಿರುವ ಗೋಪಾಲ್ ಗಂಜ್ ಜಿಲ್ಲಾಧಿಕಾರಿ ಮೂರು ಸದಸ್ಯರ ತಂಡ ನೇಮಿಸಿ ತನಿಖೆಗೆ ಆದೇಶಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಗೋಪಾಲ್ಗಂಜ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.