ದೇಶ

ಪಾಕಿಸ್ತಾನದ ವಿಷಯದಲ್ಲಿ ತಕ್ಷಣದ ಪ್ರತಿಕ್ರಿಯೆಯಿಂದ ದೂರವಿರಿ: ಪ್ರಧಾನಿ ಮೋದಿಗೆ ಕಾಂಗ್ರೆಸ್ ಸಲಹೆ

Srinivas Rao BV

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಸ್ಥಿರ ವಿದೇಶಾಂಗ ನೀತಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್, ಪಾಕಿಸ್ತಾನದ ವಿಷಯದಲ್ಲಿ ತಕ್ಷಣದ ಪ್ರತಿಕ್ರಿಯೆ ನೀಡುವುದರಿಂದ ದೂರವಿರಬೇಕು ಎಂದು ಸಲಹೆ ನೀಡಿದೆ.

ಈ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಗಳು ಹವಾಮಾನಕ್ಕಿಂತ ವೇಗವಾಗಿ ಬದಲಾಗುತ್ತದೆ ಎಂದು ವ್ಯಂಗ್ಯವಾಡಿರುವ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ, ಪಾಕಿಸ್ತಾನದೆಡೆಗೆ ಮೋದಿ ಸರ್ಕಾರದ ವಿದೇಶಾಂಗ ನೀತಿಯನ್ನು ಅರ್ಥಮಾಡಿಕೊಳ್ಳುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಒಂದು ದಿನ ಪಾಕಿಸ್ತಾನದ ವಿರುದ್ಧವಾಗಿದ್ದರೆ ಮತ್ತೊಂದು ದಿನ ಲಾಹೋರ್ ಗೆ ಹೋಗುತ್ತಾರೆ. ಒಂದು ದಿನ ಮಾತನಾಡದೆ ಇದ್ದರೆ, ಮತ್ತೊಂದು ದಿನ ಪಾಕಿಸ್ತಾನದೊಂದಿಗೆ ಉನ್ನತ ಮಟ್ಟದ ಸಭೆ ನಡೆಸುತ್ತಾರೆ ಎಂದು ಅಭಿಷೇಕ್ ಮನು ಸಿಂಘ್ವಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನದ ವಿಷಯದಲ್ಲಿ ಕೇಂದ್ರ ಸರ್ಕಾರ ತಕ್ಷಣದ ಪ್ರತಿಕ್ರಿಯೆ ನೀಡುವುದನ್ನು ನಿಲ್ಲಿಸಬೇಕು, ಸ್ಥಿರತೆ ಇದ್ದಲ್ಲಿ ಪಾಕಿಸ್ತಾನದ ವಿಷಯದಲ್ಲಿ ಕೇಂದ್ರ ಸರ್ಕಾರದೊಂದಿಗೆ ನಾವಿದ್ದೇವೆ ಎಂದು ಅಭಿಷೇಕ್ ಮನು ಸಿಂಘ್ವಿ  ತಿಳಿಸಿದ್ದಾರೆ.

SCROLL FOR NEXT