ಅಮರನಾಥ ದೇವಾಲಯದ ಹಿಮಲಿಂಗ 
ದೇಶ

ಪೂಜೆಯೊಂದಿಗೆ 48 ದಿನಗಳ ವಾರ್ಷಿಕ ಅಮರನಾಥ ಯಾತ್ರೆಗೆ ತೆರೆ

ಜುಲೈ 2ರಂದು ಆರಂಭಗೊಂಡಿದ್ದ 48 ದಿನಗಳ ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ ಗುರುವಾರ ವಿಶೇಷ ಪೂಜೆಯೊಂದಿಗೆ ಶಾಂತಿಯುತವಾಗಿ...

ಶ್ರೀನಗರ: ಜುಲೈ 2ರಂದು ಆರಂಭಗೊಂಡಿದ್ದ 48 ದಿನಗಳ ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ ಗುರುವಾರ ವಿಶೇಷ ಪೂಜೆಯೊಂದಿಗೆ ಶಾಂತಿಯುತವಾಗಿ ಅಂತ್ಯಗೊಂಡಿದೆ.
ಶಿವನ ಹಿಮಲಿಂಗಕ್ಕೆ ಸಾಂಪ್ರದಾಯಿಕ ಪೂಜೆ ನೆರವೇರಿಸುವ ಮೂಲಕ ಈ ವರ್ಷದ ಅಮರನಾಥ ಯಾತ್ರೆಯನ್ನು ಮುಕ್ತಾಯಗೊಳಿಸಲಾಗಿದೆ ಎಂದು ಶ್ರೀ ಅಮರನಾಥ್ ದೇವಾಲಯದ ಆಡಳಿತ ಮಂಡಳಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಮರನಾಥ ಗುಹೆ ಉತ್ತರ ಕಾಶ್ಮೀರದಲ್ಲಿರುವ ಅನಂತನಾಗ್‌ ಜಿಲ್ಲೆಯಲ್ಲಿದ್ದು, ಜಮ್ಮು ಕಾಶ್ಮೀರದ ರಾಜಧಾನಿ ಶ್ರೀನಗರದಿಂದ 140 ಕಿ.ಮೀ. ದೂರದಲ್ಲಿದೆ. ಸಮುದ್ರ ಮಟ್ಟದಿಂದ 13000 ಅಡಿ ಎತ್ತರದಲ್ಲಿದೆ. ಇದು ಭಾರತದ ಅತೀ ದೊಡ್ಡ ಗುಹೆಯಾಗಿದ್ದು 130 ಅಡಿ ವ್ಯಾಸವನ್ನು ಹೊಂದಿದೆ.
ಅಮರನಾಥ ಯಾತ್ರೆಯು ಪ್ರತಿ ವರ್ಷ ಜುಲೈ ಹಾಗೂ ಆಗಸ್ಟ್‌ ತಿಂಗಳಿನಲ್ಲಿ ನಡೆಯುತ್ತದೆ. ಅಮರನಾಥ ಗುಹೆಯನ್ನು ತಲುಪಲು ಚಂದನವಾರಿ ಅಥವಾ ಬಲ್ಟಾಲ್‌ನಿಂದ ಚಾರಣ, ಕುದುರೆ ಅಥವಾ ಹೆಲಿಕಾಪ್ಟರ್‌ನಲ್ಲೇ ಸಾಗಬೇಕು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ಹೆಲಿಕಾಪ್ಟರ್‌ನಿಂದ ಉಳಿಯುವಾಗ 2 ತಿಂಗಳ ಮಗುವಿನೊಂದಿಗೆ ಎಡವಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪತ್ನಿ ಉಷಾ, Video

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೀಗೂ ಉಂಟೆ?: BJP ಶಾಸಕನ ಬಂಗಲೆ ತೊಳೆಯಲು ಹೋದ ಅಗ್ನಿಶಾಮಕ ವಾಹನ; ವಿಡಿಯೋ ವೈರಲ್‌ ಬೆನ್ನಲ್ಲೇ ₹2,700 ದಂಡ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!