ನವದೆಹಲಿ: ಕಾಶ್ಮೀರದ ಬಗ್ಗೆ ಭಾರತ ತನ್ನ ನಿಲುವನ್ನು ಪುನರುಚ್ಛರಿಸಿದ್ದು, ಕಾಶ್ಮೀರದ ವಿಚಾರದಲ್ಲಿ ಪಾಕಿಸ್ತಾನಕ್ಕೆ ಮಾನ್ಯತೆ ಇಲ್ಲ, ಒಂದು ವೇಳೆ ಬಾಹ್ಯ ಹಸ್ತಕ್ಷೇಪ ಎದುರಾದಲ್ಲಿ ಅದನ್ನು ಭಾರತ ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
"ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂಬುದನ್ನು ಈಗಾಗಲೇ ಪಾಕಿಸ್ತಾನಕ್ಕೆ ಸ್ಪಷ್ಟಪಡಿಸಿದ್ದೇವೆ ಎಂದು ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್, ಮೋದಿ ಹೇಳಿಕೆ ಬಗ್ಗೆ 'ಲಕ್ಷ್ಮಣ ರೇಖೆ ದಾಟಿದ್ದಾರೆ' ಎಂಬ ಪಾಕಿಸ್ತಾನದ ಹೇಳಿಕೆಗೆ ವಿಕಾಸ್ ಸ್ವರೂಪ್ ಪ್ರತಿಕ್ರಿಯೆ ನೀಡಿದ್ದು, ಪಾಕಿಸ್ತಾನ ತನ್ನ ರಾಜತಾಂತ್ರಿಕ ನಡೆಯಲ್ಲಿಯೇ ಇಂದಿಗೂ ಲಕ್ಷ್ಮಣ ರೇಖೆಯನ್ನು ಪಾಲಿಸುವುದಿಲ್ಲ, ಪ್ರಧಾನಿ ನರೇಂದ್ರ ಮೋದಿ ಲಕ್ಷ್ಮಣ ರೇಖೆ ದಾಟಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಬಲೂಚಿಸ್ಥಾನದ ವಿಷಯ ಪ್ರಸ್ತಾಪ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಲಕ್ಷ್ಮಣ ರೇಖೆ ದಾಟಿದ್ದಾರೆ, ಮುಂದಿನ ತಿಂಗಳು ನಡೆಯಲಿರುವ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸುವುದಾಗಿ ಪಾಕಿಸ್ತಾನ ತಿಳಿಸಿದೆ.