ನವದೆಹಲಿ: ಉತ್ತರ ಪ್ರದೇಶದ ಬುಲಂದ್ ಶಹರ್ ತಾಯಿ, ಮಗಳ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಯನ್ನು ಸಿಬಿಐ ಶುಕ್ರವಾರ ಆರಂಭಿಸಿದ್ದು, ಈ ಸಂಬಂಧ ಆರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಕರಣ ಸಂಬಂಧ ಆರು ಆರೋಪಿಗಳ ವಿರುದ್ಧ ದರೋಡೆ, ಸಾಮೂಹಿಕ ಅತ್ಯಾಚಾರ ಹಾಗೂ ಅಪಹರಣ ಕೇಸ್ ದಾಖಲಿಸಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಸಿಬಿಐ ವಕ್ತಾರ ದೇವ್ ಪ್ರೀತ್ ಸಿಂಗ್ ಅವರು ತಿಳಿಸಿದ್ದಾರೆ.
ಮಹಿಳೆ ಹಾಗೂ ಆಕೆಯ ಅಪ್ರಾಪ್ತ ಮಗಳ ಮೇಲಿನ ಅತ್ಯಾಚಾರ ಪ್ರಕರಣದ ಪೊಲೀಸ್ ತನಿಖೆಯು ತೃಪ್ತಿಕರವಾಗಿಲ್ಲವೆಂದು ಅಲಹಬಾದ್ ಹೈಕೋರ್ಟ್ ಪ್ರಕರಣನ್ನು ಸಿಬಿಐಗೆ ವಹಿಸಿತ್ತು.
ಜುಲೈ 29ರಂದು ಬುಲಂದ್ ಶಹರ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆಕೋರ ನೋಯಿಡಾ ಮೂಲದ ಮಹಿಳೆ ಮತ್ತು ಆಕೆಯ ಅಪ್ರಾಪ್ತ ಮಗಳನ್ನು ಕಾರಿನಿಂದ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics