ರಾಷ್ಟ್ರಪತಿಗಳೊಂದಿಗೆ ಕಾಶ್ಮೀರಿ ಪ್ರತಿಪಕ್ಷ ನಾಯಕರು
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನೇತೃತ್ವದಲ್ಲಿ ಪ್ರತಿಪಕ್ಷಗಳ ನಾಯಕರು ಶನಿವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿ ಮಾಡಿದ್ದು, ಪ್ರಸ್ತೂತ ಕಾಶ್ಮೀರ ಬಿಕ್ಕಟ್ಟಿಗೆ ರಾಜಕೀಯವಾಗಿ ಪರಿಹಾರ ಕಂಡುಕೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿ ಎಂದು ಮನವಿ ಮಾಡಿದ್ದಾರೆ.
ಸುಮಾರು 20 ಪ್ರತಿಪಕ್ಷ ನಾಯಕರೊಂದಿಗೆ ರಾಷ್ಟ್ರಪತಿಗಳ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಒಮರ್, ಕೇಂದ್ರ ಸರ್ಕಾರದ ವೈಫಲ್ಯವೇ ಇಂದಿನ ಕಾಶ್ಮೀರ ಸ್ಥಿತಿಗೆ ಕಾರಣ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ಈ ಕೂಡಲೇ ಕಣಿವೆ ರಾಜ್ಯದ ಸಮಸ್ಯೆಗಳನ್ನು ರಾಜಕೀಯವಾಗಿ ಅರ್ಥಪೂರ್ಣ ಮಾತುಕತೆಯ ಮೂಲಕ ಪರಿಹಾರ ಕಂಡುಕೊಳ್ಳುವಂತೆ ಕೇಂದ್ರ ಸೂಚಿಸಿ ಎಂದು ರಾಷ್ಟ್ರಪತಿಗಳಿಗೆ ಮನವಿ ಮಾಡಿರುವುದಾಗಿ ಒಮರ್ ತಿಳಿಸಿದ್ದಾರೆ.