ಸಾಂದರ್ಭಿಕ ಚಿತ್ರ 
ದೇಶ

ಕಡಪ: ಮದುವೆ ದಿಬ್ಬಣಕ್ಕೆ ಹೊರಟಿದ್ದ ವಾಹನಕ್ಕೆ ಲಾರಿ ಡಿಕ್ಕಿ- 5 ಸಾವು

ಮದುವೆ ದಿಬ್ಬಣಕ್ಕೆಂದು ಹೊರಟಿದ್ದ ವಾಹನಕ್ಕೆ ವೇಗವಾಗಿ ಬರುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಡಪ-ಕರ್ನೂಲ್ ನ...

ಕಡಪ: ಮದುವೆ ದಿಬ್ಬಣಕ್ಕೆಂದು ಹೊರಟಿದ್ದ ವಾಹನಕ್ಕೆ ವೇಗವಾಗಿ ಬರುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಡಪ-ಕರ್ನೂಲ್ ನ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ನಡೆದಿದೆ.

ವಧುವಿನ ಕಡೆಯ 13 ಜನರನ್ನು ಟ್ರ್ಯಾಕ್ಟರ್ ಒಂದು ಮದುವೆ ದಿಬ್ಬಣಕ್ಕೆಂದು ಕಡಪದಲ್ಲಿರುವ ದೆವುನಿಗೆ ಹೊತ್ತುಯ್ಯುತ್ತಿತ್ತು. ಕೆಲ ದೂರ ಹೋಗುತ್ತಿದ್ದಂತೆ ಪೆಟ್ರೋಲ್ ಸಮಸ್ಯೆ ಉಂಟಾದ ಕಾರಣ ಟ್ರ್ಯಾಕ್ಟರನ್ನು ಪಕ್ಕದಲ್ಲಿ ನಿಲ್ಲಿಸಲಾಗಿತ್ತು. ಚಾಲಕ ಪೆಟ್ರೋಲ್ ಗಾಗಿ ಬಂಕ್ ಗಾಗಿ ಹುಡುಕಾಟ ನಡೆಸುತ್ತಿದ್ದ. ಈ ವೇಳೆ ವೇಗವಾಗಿ ಬರುತ್ತಿದ್ದ ಲಾರಿ ಹಿಂದಿನಿಂದ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಟ್ರ್ಯಾಕ್ಟರ್ ನಲ್ಲಿದ್ದ 13 ಮಂದಿಯ ಪೈಕಿ ಐವರು ಸ್ಥಳದಲ್ಲೇ ಸಾವನ್ನಪ್ಪಿ, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಎ. ವೆಂಕಟ ರಮಣ (22), ಬಿ. ಲಕ್ಷ್ಮಿ ಪ್ರಸನ್ನ (10), ಚಾಲಕ ಜಿ. ಬಾಲರಾಜು, ಬಿ. ಬಾಲಕೃಷ್ಣ (30) ಎ. ಪೆದ್ದ ಪೆದ್ದಯ್ಯ (40) ಎಂದು ಗುರ್ತಿಸಲಾಗಿದೆ.

ಗಾಯಗೊಂಡವ 8 ಮಂದಿಯ ಪೈಕಿ ಇದೀಗ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಘಟನೆ ಬಳಿಕ ಲಾರಿ ಚಾಲಕ ತಲೆಮರೆಸಿಕೊಂಡಿದ್ದು, ಚಾಲಕನಿಗಾಗಿ ದುವ್ವುರು ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT