ದೆಹಲಿ (ಸಂಗ್ರಹ ಚಿತ್ರ) 
ದೇಶ

ಹರಿಯಾಣದ ಮಹೇಂದ್ರಗಢ್ ನಲ್ಲಿ ಭೂಕಂಪ: ದೆಹಲಿಯಲ್ಲೂ ಭೂಕಂಪನದ ಅನುಭವ

ಹರಿಯಾಣದ ಮಹೇಂದ್ರಗಢ್ ನಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.7 ತೀವ್ರತೆ ದಾಖಲಾಗಿದೆ ಎಂದು ತಿಳಿದುಬಂದಿದೆ...

ಮಹೇಂದ್ರಗಢ್: ಹರಿಯಾದ ಮಹೇಂದ್ರಗಢ್ ನಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.7 ತೀವ್ರತೆ ದಾಖಲಾಗಿದೆ ಎಂದು ತಿಳಿದುಬಂದಿದೆ.

ಇಂದು ಮಧ್ಯಾಹ್ನ 2.50 ಗಂಟೆ ಸುಮಾರಿಗೆ ಭೂಕಂಪ ಸಂಭವಿಸಿದ್ದು, ಭೂಕಂಪನದ ಕೇಂದ್ರಬಿಂದು ಕುರಿತಂತೆ ಈ ವರೆಗೂ ಮಾಹಿತಿಗಳು ಲಭ್ಯವಾಗಿಲ್ಲ. ಆದರೆ, ಭೂಕಂಪವು ಭೂಮಿಯ 16 ಕಿ.ಮೀ ಆಳದಲ್ಲಿ ಸಂಭವಿಸಿರುವುದಾಗಿ  ಪ್ರಾಥಮಿಕ ಭೂಕಂಪ ವರದಿಗಳು ತಿಳಿಸಿವೆ.

ಹರಿಯಾಣದ ಮಹೇಂದ್ರಗಢ್‌ನಲ್ಲಿ ಸಂಭವಿಸಿದ ಭೂಕಂಪದ ಪರಿಣಾಮ ದೆಹಲಿ, ಎನ್'ಸಿಆರ್ ನಲ್ಲೂ ಭೂಕಂಪನದ ಅನುಭವವಾಗಿದೆ ಎಂದು ಮೂಲಗಳು ತಿಳಿಸಿವೆ.

ಭೂಕಂಪದಲ್ಲಿ ಸಾವು-ನೋವುಗಳು ಸಂಭವಿಸಿರುವ ಕುರಿತಂತೆ ಈ ವರೆಗೂ ಯಾವುದೇ ವರದಿಗಳು ತಿಳಿದುಬಂದಿದೆ. ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!