ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ಪ್ರವಾಹ ಪೀಡಿತ ರಾಜ್ಯಗಳಿಗೆ ಪ್ರಧಾನಿ ಮೋದಿ ಪರಿಹಾರ ಭರವಸೆ

ಉತ್ತರ ಪ್ರದೇಶ ಬಿಹಾರ, ಉತ್ತರಾಖಾಂಡ್, ರಾಜಸ್ತಾನ್ ಮತ್ತು ಮಧ್ಯಪ್ರದೇಶದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಪರಿಹಾರ ಹಾಗೂ ರಕ್ಷಣಾ ಸಹಾಯ ನೀಡುವುದಾಗಿ ...

ನವದೆಹಲಿ: ಉತ್ತರ ಪ್ರದೇಶ ಬಿಹಾರ, ಉತ್ತರಾಖಾಂಡ್, ರಾಜಸ್ತಾನ್ ಮತ್ತು ಮಧ್ಯಪ್ರದೇಶದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಪರಿಹಾರ ಹಾಗೂ ರಕ್ಷಣಾ ಸಹಾಯ ನೀಡುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ.

ಪ್ರವಾಹ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಪ್ರವಾಹ ಪೀಡಿತ ರಾಜ್ಯಗಳಾಗಿರುವ ಉತ್ತರ ಪ್ರದೇಶ, ಬಿಹಾರ, ಉತ್ತರಾಖಾಂಡ್, ರಾಜಸ್ತಾನ ಮತ್ತು ಮಧ್ಯಪ್ರದೇಶದಲ್ಲಿ ಜನತೆ ಸುರಕ್ಷಿತರಾಗಿರಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.

ದೇಶದಲ್ಲಿನ ವಿವಿಧ ರಾಜ್ಯಗಳಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ಗೃಹ ಸಚಿವ ರಾಜನಾಥ್ ಸಿಂಗ್ ಅವರು ಅವಲೋಕಿಸುತ್ತಿದ್ದಾರೆ. ಅಲ್ಲದೆ, ಆಯಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೂ ಮಾತುಕತೆ ನಡೆಸುತ್ತಿದ್ದಾರೆ. ಪ್ರವಾಹ ಪೀಡಿತ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ, ರಕ್ಷಣಾ ಸಹಾಯ ಹಾಗೂ ಪರಿಹಾರ ನೀಡುತ್ತದೆ. ಶೀಘ್ರಗತಿಯಲ್ಲಿ ಪ್ರವಾಹ ಪೀಡಿತ ರಾಜ್ಯಗಳು ಸಹಜ ಸ್ಥಿತಿಗೆ ಮರಳಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!