ಕಾಲುವೆಗೆ ಉರುಳಿದ ಬಸ್ 
ದೇಶ

ಚಾಲಕನ ನಿದ್ರೆ ಮಂಪರು; ಕಾಲುವೆಗೆ ಉರುಳಿದ ಬಸ್ , 9 ಮಂದಿ ಸಾವು

ತೆಲಂಗಾಣದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, ನಿದ್ರೆ ಮಂಪರಿನಲ್ಲಿದ್ದ ಚಾಲಕ ವೇಗವಾಗಿ ಬಸ್ ಚಲಾಯಿಸಿದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದೆ. ಘಟನೆಯಲ್ಲಿ 10 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

ಖಮ್ಮಂ: ತೆಲಂಗಾಣದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, ನಿದ್ರೆ ಮಂಪರಿನಲ್ಲಿದ್ದ ಚಾಲಕ ವೇಗವಾಗಿ ಬಸ್ ಚಲಾಯಿಸಿದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ  ಉರುಳಿದೆ. ಘಟನೆಯಲ್ಲಿ 10 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

ರಾತ್ರಿ ಸುಮಾರು 2 ಗಂಟೆ ಸುಮಾರಿನಲ್ಲಿ ಈ ಭೀಕರ ಬಸ್ ಅಪಘಾತ ಸಂಭವಿಸಿದ್ದು, ಖಮ್ಮಂ ಜಿಲ್ಲೆಯ ನಾಯಕನೇ ಗೂಡಂ ಪ್ರಾಂತ್ಯದ ಬಳಿ ಬಸ್ ಕಾಲುವೆಗೆ ಉರುಳಿದೆ ಎಂದು  ತಿಳಿದುಬಂದಿದೆ. ಘಟನೆಯಲ್ಲಿ 10 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಖಮ್ಮಂ, ಪಾಲೇರು ಸರ್ಕಾರಿ ಆಸ್ಪತ್ರೆಗೆ ದಾಖಲು  ಮಾಡಲಾಗಿದೆ ಎಂದು ತಿಳಿದುಬಂದಿದೆ.

ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಮಿಸಿದ ಅಗ್ನಿಶಾಮಕ ದಳ ಹಾಗೂ ಪೊಲೀಸರು ಗಾಯಾಳುಗಳನ್ನು ಆ್ಯಂಬುಲೆನ್ಸ್ ಮೂಲಕವಾಗಿ ಆಸ್ಪತ್ರೆ ರವಾನಿಸಿದ್ದಾರೆ. ನೀರಿನಲ್ಲಿ ಮುಳುಗಿದ್ದ ಬಸ್  ಅನ್ನು 2 ಕ್ರೇನ್ ಗಳ ಮೂಲಕ ಮೇಲಕ್ಕೆ ಎತ್ತಲಾಗಿದೆ. ಮೂಲಗಳ ಪ್ರಕಾರ ಸುಮಾರು ಸಿಬ್ಬಂದಿ ಸೇರಿದಂತೆ 40ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊಂದಿದ್ದ ಖಾಸಗಿ ಬಸ್ ಹೈದರಾಬಾದ್ ನ  ಮಿಯಾಪುರ್ ನಿಂದ್ ಸೂರ್ಯಪೆಟ್ ಗೆ ಖಮ್ಮಂ, ರಾಜಮಂಡ್ರಿ ಮಾರ್ಗವಾಗಿ ಚಲಿಸುತ್ತಿದ್ದ ಬಸ್ ಖಮ್ಮಂ ಜಿಲ್ಲೆಯ ನಾಯಕನೇ ಗೂಡಂ ಪ್ರಾಂತ್ಯದ ಬಳಿ ಕಾಲುವೆಗೆ ಉರುಳಿದೆ.

ಪ್ರತ್ಯಕ್ಷ ದರ್ಶಿಗಳು ತಿಳಿಸಿರುವಂತೆ ಬಸ್ ಅತಿಯಾದ ವೇಗದಿಂದ ಚಲಿಸಿ, ಕಾಲುವೆಗೆ ಉರುಳಿದೆ ಎಂದು ಹೇಳಿದ್ದಾರೆ. ಅಂತೆಯೇ ಗಾಯಗೊಂಡ ಪ್ರಯಾಣಿಕರು ಬಸ್ ಚಾಲಕ ನಿದ್ರೆ  ಮಂಪರಿನಲ್ಲಿದ್ದ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT