ಪ್ರಧಾನಿ ಮೋದಿ ಹೇಳಿಕೆಗೆ ಬೆಂಬಲ: ಬಲೂಚಿಸ್ಥಾನ ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧ ಪ್ರಕರಣ ದಾಖಲಿಸಿದ ಪಾಕ್
ಬಲೂಚಿಸ್ಥಾನದ ಸ್ವಾತಂತ್ರ್ಯ ಹೋರಾಟಗಾರರಿಗೆ ಪ್ರಧಾನಿ ನರೇಂದ್ರ ಮೋದಿ ಬಹಿರಂಗವಾಗಿ ಬೆಂಬಲ ಘೋಷಿಸಿರುವುದು ಪಾಕಿಸ್ತಾನಕ್ಕೆ ತಲೆನೋವಾಗಿ ಪರಿಣಮಿಸಿದೆ.
ಕ್ವೆಟ್ಟಾ: ಬಲೂಚಿಸ್ಥಾನದ ಸ್ವಾತಂತ್ರ್ಯ ಹೋರಾಟಗಾರರಿಗೆ ಪ್ರಧಾನಿ ನರೇಂದ್ರ ಮೋದಿ ಬಹಿರಂಗವಾಗಿ ಬೆಂಬಲ ಘೋಷಿಸಿರುವುದು ಪಾಕಿಸ್ತಾನಕ್ಕೆ ತಲೆನೋವಾಗಿ ಪರಿಣಮಿಸಿದ್ದು ಬಲೂಚಿಸ್ಥಾನದ ಪ್ರಮುಖ ಪ್ರತ್ಯೇಕತಾವಾದಿ ನಾಯಕರ ವಿರುದ್ಧ ಪಾಕಿಸ್ತಾನ ಎಫ್ ಐ ಆರ್ ದಾಖಲಿಸಿದೆ.
ಭಾರತದ ಪ್ರಧಾನಿಯ ಹೇಳಿಕೆಯನ್ನು ಬೆಂಬಲಿಸಿದ್ದಕ್ಕಾಗಿ ಬಲೂಚ್ ಪ್ರತ್ಯೇಕತಾವಾದಿ ನಾಯಕರಾದ ಬ್ರಹಾಂದಗ್ ಬುಗ್ತಿ, ಹರ್ಬಿಯರ್ ಮರ್ರಿ, ಬಾನುಕ್ ಕರೀಮಾ ಬಲೂಚ್ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಡಾನ್ ನ್ಯೂಸ್ ವರದಿ ಪ್ರಕಟಿಸಿದೆ.
ಬಲೂಚಿಸ್ಥಾನದ ಖುಜ್ದರ್ ಪ್ರಾಂತ್ಯದಲ್ಲಿರುವ ಕೆಲವರು ಬಲೂಚಿಸ್ಥಾನದ ಪ್ರತ್ಯೇಕತಾವಾದಿಗಳ ವಿರುದ್ಧ ದೂರು ನೀಡಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪಾಕಿಸ್ತಾನದ ವಿರುದ್ಧ ಸಮರ ಸಾರಿರುವ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.
ದೂರುದಾರರು ತಮ್ಮ ದೂರಿನಲ್ಲಿ ಬಲೂಚಿಸ್ಥಾನದ ಪ್ರತ್ಯೇಕತಾವಾದಿಗಳು ಭಾರತದ ಪ್ರಧಾನಿ ನರೇಂದ್ರ ಮೋದಿ ಬಲೂಚಿಸ್ಥಾನದ ಸ್ವಾತಂತ್ರ್ಯ ಹೋರಾಟದ ಬಗ್ಗೆ ನೀಡಿದ್ದ ಹೇಳಿಕೆಯನ್ನು ಬೆಂಬಲಿಸಿದ್ದರು ಎಂದು ಆರೋಪಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.