ಜಯಲಲಿತಾ 
ದೇಶ

ಕರುಣಾನಿಧಿ ಅಧಿವೇಶನಕ್ಕೆ ಏಕೆ ಹಾಜರಾಗುತ್ತಿಲ್ಲ?: ಜಯಾ

ಆಡಳಿತರೂಢ ಎಐಎಡಿಎಂ ಹಾಗೂ ಪ್ರತಿಪಕ್ಷ ಡಿಎಂಕೆ ನಡುವಿನ ವಾಕ್ಸಮರ ಮುಂದುವರೆದಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ವರಿಷ್ಠ...

ಚೆನ್ನೈ: ಆಡಳಿತರೂಢ ಎಐಎಡಿಎಂ ಹಾಗೂ ಪ್ರತಿಪಕ್ಷ ಡಿಎಂಕೆ ನಡುವಿನ ವಾಕ್ಸಮರ ಮುಂದುವರೆದಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ವರಿಷ್ಠ ಎಂ.ಕರುಣಾನಿಧಿ ಅವರು ಏಕೆ ಅಧಿವೇಶನಕ್ಕೆ ಹಾಜರಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಜಯಲಲಿತಾ ಅವರು ಸೋಮವಾರ ಪ್ರಶ್ನಿಸಿದ್ದಾರೆ.
ಸದನಕ್ಕೆ ಅಗೌರವ ತೋರಿದ ಆರೋಪದ ಮೇಲೆ ಡಿಎಂಕೆಯ 80 ಶಾಸಕರು ಅಮಾನತುಗೊಂಡಿದ್ದು, ಉಳಿದ ಶಾಸಕರು ಇಂದು ಅಮಾನತು ಆದೇಶವನ್ನು ಹಿಂಪಡೆಯುವಂತೆ ಸ್ಪೀಕರ್ ಧನಪಾಲ್ ಅವರನ್ನು ಒತ್ತಾಯಿಸಿದರು. ಆದರೆ ಸ್ಪೀಕರ್ ಇದಕ್ಕೆ ನಿರಾಕರಿಸಿದ ಹಿನ್ನೆಲೆಯಲ್ಲಿ ಆ 10 ಶಾಸಕರು ಸಹ ಸದನದಿಂದ ಹೊರ ನಡೆದರು.
ಈ ವೇಳೆ ಸದನವನ್ನು ಉದ್ದೇಶಿಸಿ ಮಾತನಾಡಿದ ಜಯಾ, ಪ್ರತಿಪಕ್ಷಗಳಿಗೆ ನಿಜಕ್ಕೂ ಜನರ ಬಗ್ಗೆ ಕಾಳಜಿ ಇದ್ದರೆ. ಸದನದಲ್ಲಿ ಹಾಜರಿದ್ದು, ಚರ್ಚೆಯಲ್ಲಿ ಭಾಗವಹಿಸಲಿ. ಓರ್ವ ಮಾಜಿ ಸಚಿವ ಸೇರಿದಂತೆ 10 ಡಿಎಂಕೆ ಸದಸ್ಯರ ಪೈಕಿ ಕನಿಷ್ಠ ಇಬ್ಬರಾದರೂ ಸದನದಲ್ಲಿ ಮಾತನಾಡಲಿ. ಈ ಹಿಂದೆ ನಮ್ಮ ಪಕ್ಷದ ಎಲ್ಲಾ ಶಾಸಕರನ್ನು ಅಮಾನತು ಮಾಡಿದಾಗ ನಾನು ಒಬ್ಬಳೇ ನಮ್ಮ ಪಕ್ಷವನ್ನು ಸದನದಲ್ಲಿ ಪ್ರತಿನಿಧಿಸಿದ್ದೇ ಎಂದು ನೆನಪಿಸಿಕೊಂಡರು. ಅಲ್ಲದೆ ಕರುಣಾನಿಧಿ ಅವರು ಏಕೆ ಚರ್ಚೆಯಲ್ಲಿ ಭಾಗವಹಿಸುತ್ತಿಲ್ಲ ಎಂದು ಪ್ರಶ್ನಿಸಿದರು.
ಈ ಮಧ್ಯೆ ಡಿಎಂಕೆ ಸ್ಪೀಕರ್ ಅಮಾನತು ಆದೇಶವನ್ನು ಪ್ರಶ್ಮಿಸಿದ ಹೈಕೋರ್ಟ್ ಮೆಟ್ಟಿಲೇರಿದ್ದು, ವಿಚಾರಣೆ ನಡೆಸಿದ ಕೋರ್ಟ್ ವಿಧಾನಸಭೆ ಕಾರ್ಯದರ್ಶಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ನೀಡಿದೆ. ಆದರೆ ಸ್ಪೀಕರ್ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!