ದೇಶ

ಪಾಕ್ ನಲ್ಲಿ ನಡೆಯಲಿರುವ ಸಾರ್ಕ್ ಸಭೆಗೆ ಅರುಣ್ ಜೇಟ್ಲಿ ಗೈರಾಗುವ ಸಾಧ್ಯತೆ

Srinivas Rao BV

ನವದೆಹಲಿ: ಮುಂದಿನ ವಾರ ಪಾಕಿಸ್ತಾನದಲ್ಲಿ ನಡೆಯಲಿರುವ ಸಾರ್ಕ್ ರಾಷ್ಟ್ರಗಳ ಸಭೆಗೆ ಕೇಂದ್ರ ಸಚಿವ ಅರುಣ್ ಜೇಟ್ಲಿ ಭಾಗವಹಿಸುವುದಿಲ್ಲ ಎಂಬ ವರದಿಗಳು ಪ್ರಕಟವಾಗಿದೆ.

ಅರುಣ್ ಜೇಟ್ಲಿ ಪಾಕಿಸ್ತಾನದಲ್ಲಿ ನಡೆಯಲಿರುವ ಸಾರ್ಕ್ ರಾಷ್ಟ್ರಗಳ ಸಭೆಗೆ ಗೈರು ಹಾಜರಾಗುವುದರಿಂದ ಭಾರತ-ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸಂಬಂಧದಲ್ಲಿ ಈಗಾಗಲೇ ಉಂಟಾಗಿರುವ ಬಿರುಕನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.  ಆಗಸ್ಟ್ 25-26 ರಂದು ಪಾಕಿಸ್ತಾನದಲ್ಲಿ ಸಾರ್ಕ್ ರಾಷ್ಟ್ರಗಳ ವಿತ್ತ ಸಚಿವರ ಸಭೆ ನಡೆಯಲಿದೆ. ಆದರೆ ಅರುಣ್ ಜೇಟ್ಲಿ ಮಾತ್ರ ಸಭೆಗೆ ಗೈರಾಗುವ ಸಾಧ್ಯತೆ ಇದೆ ಎಂದು ನ್ಯೂಸ್ 18 ವರದಿ ಪ್ರಕಟಿಸಿದೆ. ಅರುಣ್ ಜೇಟ್ಲಿ ಪರವಾಗಿ ಹಣಕಾಸು ವ್ಯವಹಾರಗಳ ಕಾರ್ಯದರ್ಶಿ ಶಕ್ತಿಕಾಂತ್ ದಾಸ್ ಹಾಗೂ ಹಣಕಾಸು ಇಲಾಖೆಯ ರಾಜ್ಯ ಸಚಿವರು ಪಾಕಿಸ್ತಾನದಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಈ ವರೆಗೂ ಭಾರತ ಸರ್ಕಾರದಿಂದ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ. ಈ  ತಿಂಗಳ ಪ್ರಾರಂಭದಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಪಾಕಿಸ್ತಾನಕ್ಕೆ ಹೋಗಿ ಬಂದ ನಂತರ ಪ್ರತಿಕ್ರಿಯೆ ನೀಡಿದ್ದ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಪಾಕಿಸ್ತಾನಕ್ಕೆ ಹೋಗುವುದು ನರಕಕ್ಕೆ ಹೋದಂತೆ ಎಂದು ಹೇಳಿದ್ದರು.

SCROLL FOR NEXT