ರೋಹಿತ್ ವೇಮುಲ 
ದೇಶ

ಆತ್ಮಹತ್ಯೆ ಮಾಡಿಕೊಂಡಿದ್ದ ರೋಹಿತ್ ವೇಮುಲ ದಲಿತನಲ್ಲ: ತನಿಖಾ ಆಯೋಗ

ಹೈದರಾಬಾದ್ ಕೇಂದ್ರ ವಿಶ್ವವಿದ್ಯಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಪರಿಶಿಷ್ಟ ಜಾತಿ(ಎಸ್ಸಿ) ಸಮುದಾಯಕ್ಕೆ...

ನವದೆಹಲಿ: ಹೈದರಾಬಾದ್ ಕೇಂದ್ರ ವಿಶ್ವವಿದ್ಯಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಪರಿಶಿಷ್ಟ ಜಾತಿ(ಎಸ್ಸಿ) ಸಮುದಾಯಕ್ಕೆ ಸೇರಿದವನಲ್ಲ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ನೇಮಿಸಿದ್ದ ಏಕ ಸದಸ್ಯತ್ವದ ಆಯೋಗ ವರದಿ ಮಾಡಿದೆ.

ಕಳೆದ ಜನವರಿಯಲ್ಲಿ ವೇಮುಲಾ ವಿಶ್ವವಿದ್ಯಾನಿಲಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಇದು ದೇಶಾದ್ಯಂತ ಆಕ್ರೋಶಕ್ಕೆ ಗುರಿಯಾಗಿತ್ತು. ಈ ಸಂಬಂಧ ತನಿಖೆಗೆ ಅಲಹಾಬಾದ್ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಎಕೆ ರೂಪನ್ ವಾಲ್ ನೇತೃತ್ವದ ಏಕ ಸದಸ್ಯತ್ವ ಆಯೋಗವನ್ನು ರಚಿಸಲಾಗಿತ್ತು. ಇದೀಗ ಆಯೋಗ ವಿಶ್ವವಿದ್ಯಾಲಯ ಅನುದಾನ ಆಯೋಗಕ್ಕೆ(ಯುಜಿಸಿ) ಆಗಸ್ಟ್ ಮೊದಲ ವಾರದಲ್ಲೇ ತನ್ನ ವರದಿ ಸಲ್ಲಿಸಿದೆ ಎಂದು ಯುಜಿಸಿಯ ಮೂಲಗಳು ತಿಳಿಸಿವೆ.

ಈ ಪ್ರಕರಣಕ್ಕೆ ಸಂಬಂಧ ಈ ಹಿಂದೆ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ಥಾವರ್ ಚಂದ್ ಗೊಹ್ಲೋಟ್ ಅವರು ರೋಹಿತ್ ಮೇಮುಲಾ ಇತರ ಹಿಂದುಳಿತ ವರ್ಗಗಳಿಗೆ ಸೇರಿದ ವಡ್ಡೇರಾ ಎಂಬ ಸಮುದಾಯಕ್ಕೆ ಸೇರಿದವರಾಗಿದ್ದು, ಆತನ ಆತ್ಮಹತ್ಯೆಯನ್ನು ದಲಿತರ ಹೆಸರಿಗೆ ಥಳಕು ಹಾಕಿ ಸಮಸ್ಯೆ ಸೃಷ್ಠಿಸಲಾಗಿದೆ ಎಂದು ಪ್ರತಿಪಾದಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT