ಕಣ್ಣೂರು: ಕೇರಳದ ಕಣ್ಣೂರಿನಲ್ಲಿ ಆರ್ ಎಸ್ಎಸ್ ಕಾರ್ಯಕರ್ತ ಪಿ.ಸುರೇಶ್(33) ಎಂಬುವವರ ಮೇಲೆ ಬಾಂಬ್ ದಾಳಿ ನಡೆದಿದ್ದು, ದಾಳಿಯಲ್ಲಿ ಸುರೇಶ್ ಸೇರಿದಂತೆ ಇತರೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಿಪಿಎಂ ಕಾರ್ಯಕರ್ತರು ಸುರೇಶ್ ಮೇಲೆ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ಇತರೆ ಮೂವರನ್ನು ದೀಪಕ್, ಅರುಣ್ ಮತ್ತು ಸಂತೋಷ್ ಎಂದು ಗುರುತಿಸಲಾಗಿದ್ದು, ಸುರೇಶ್ ಸೇರಿದಂತೆ ಎಲ್ಲಾ ಗಾಯಾಳುಗಳನ್ನು ತಲಸರಿ ಇಂಧಿರಾ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮಧ್ಯಾಹ್ನ 1.30ರ ಸುಮಾರಿಗೆ ಕಣ್ಣೂರಿನ ಮೊಝಕ್ಕುಣ್ಣುನಲ್ಲಿ ಈ ಘಟನೆ ನಡೆದಿದೆ.