ನವದೆಹಲಿ: ಟ್ವೀಟರ್ ನಲ್ಲಿ ಹೆಚ್ಚು ಹಿಂಬಾಲಕರನ್ನು ಹೊಂದಿದ್ದ ಬಿಗ್ ಬಿ ಅಮಿತಾಬ್ ಬಚ್ಚನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಹಿಂದಿಕ್ಕಿದ್ದಾರೆ.
2.20 ಕೋಟಿ ಹಿಂಬಾಲಕರನ್ನು ಹೊಂದುವ ಮೂಲಕ ಟ್ವೀಟರ್ ನಲ್ಲಿ ಅತಿ ಹೆಚ್ಚು ಹಿಂಬಾಕರನ್ನು ಹೊಂದಿದ್ದ ಭಾರತೀಯ ಎಂಬ ಖ್ಯಾತಿಗೆ ಅಮಿತಾಬ್ ಬಚ್ಚನ್ ಪಾತ್ರರಾಗಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು 2.21 ಕೋಟಿ ಹಿಂಬಾಲಕರನ್ನು ಹೊಂದುವ ಮೂಲಕ ಅಮಿತಾಬ್ ರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ.
ಇದೇ ವೇಳೆ 2.09 ಕೋಟಿ ಹಿಂಬಾಲಕರನ್ನು ಹೊಂದುವ ಮೂಲಕ ಬಾಲಿವುಡ್ ನಟ ಶಾರುಖ್ ಖಾನ್ ಮೂರನೇ ಸ್ಥಾನದಲ್ಲಿದ್ದಾರೆ.