ಗುರುಗಾಂವ್ ನಲ್ಲಿ "ಆಪರೇಷನ್ ರೋಮಿಯೊ ರಿಟರ್ನ್ಸ್" ಕಾರ್ಯಾಚರಣೆ (ಸಂಗ್ರಹ ಚಿತ್ರ) 
ದೇಶ

ಗುರುಗಾಂವ್ ಪೊಲೀಸರಿಂದ 2 ಗಂಟೆಯಲ್ಲಿ 50 ರೋಮಿಯೋಗಳ ಬಂಧನ!

ರಸ್ತೆಯಲ್ಲಿ ಓಡಾಡುವ ಮಹಿಳೆಯರು ಮತ್ತು ಯುವತಿಯರನ್ನು ಚುಡಾಯಿಸುತ್ತಿದ್ದ ರೋಡ್ ರೊಮಿಯೋಗಳ ವಿರುದ್ಧ ಕಾರ್ಯಾಚರಣೆ ನಡೆಸಿರುವ ಹರ್ಯಾಣ ಪೊಲೀಸರು ಕೇವಲ 2 ಗಂಟೆಗಳ ಅವಧಿಯಲ್ಲಿ 50ಕ್ಕೂ ಹೆಚ್ಚು ಯುವಕರನ್ನು ಬಂಧಿಸಿದ್ದಾರೆ.

ಗುರುಗಾಂವ್: ರಸ್ತೆಯಲ್ಲಿ ಓಡಾಡುವ ಮಹಿಳೆಯರು ಮತ್ತು ಯುವತಿಯರನ್ನು ಚುಡಾಯಿಸುತ್ತಿದ್ದ ರೋಡ್ ರೊಮಿಯೋಗಳ ವಿರುದ್ಧ ಕಾರ್ಯಾಚರಣೆ ನಡೆಸಿರುವ ಹರ್ಯಾಣ ಪೊಲೀಸರು ಕೇವಲ 2  ಗಂಟೆಗಳ ಅವಧಿಯಲ್ಲಿ 50ಕ್ಕೂ ಹೆಚ್ಚು ಯುವಕರನ್ನು ಬಂಧಿಸಿದ್ದಾರೆ.

ಹರ್ಯಾಣದ ಗುರುಗಾಂವ್ ನಲ್ಲಿ ಇಂದು "ಆಪರೇಷನ್ ರೋಮಿಯೊ ರಿಟರ್ನ್ಸ್" ಕಾರ್ಯಾಚರಣೆ ನಡೆಸಿದ ಪೊಲೀಸರು ಈವ್ ಟೀಸಿಂಗ್ ನಲ್ಲಿ ತೊಡಗಿದ್ದ ಯುವಕರನ್ನು ಬಂಧಿಸಿದ್ದಾರೆ. ಈವ್  ಟೀಸಿಂಗ್ ಕುರಿತಂತೆ ಸಾಕಷ್ಟು ದೂರುಗಳು ಬಂದ ಹಿನ್ನಲೆಯಲ್ಲಿ ಗುರುಗಾಂವ್ ನ ಜನನಿಭಿಡ ಮಹಾತ್ಮ ಗಾಂಧಿ ರಸ್ತೆಯಲ್ಲಿ ಇಂದು ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರ ತಂಡ  ಯುವತಿಯರನ್ನು ಚುಡಾಯಿಸುತ್ತಿದ್ದ ಪಡ್ಡೆ ಹುಡುಗರನ್ನು ಬಂಧಿಸಿದ್ದಾರೆ.

ಕಳೆದ ವರ್ಷವೂ ಇಂತಹುದೇ ಕಾರ್ಯಾಚರಣೆ ನಡೆಸಿದ್ದ ಗುರುಗಾಂವ್ ಪೊಲೀಸರು ಸುಮಾರು 250ಕ್ಕೂ ಹೆಚ್ಚು ಯುವಕರನ್ನು ಬಂಧಿಸಿದ್ದರು. ಗುರುಂಗಾವ್ ಪೊಲೀಸರ ಕಾರ್ಯಾಚರಣೆಗೆ  ಯುವತಿಯರು ಮತ್ತು ಪೋಷಕರು ಹರ್ಷ ವ್ಯಕ್ತಪಡಿಸಿದ್ದು, ಬಂಧನಕ್ಕೀಡಾದ ಯುವಕರ ಪೋಷಕರು ಮಾತ್ರ ಪೊಲೀಸ್ ಠಾಣೆಗೆ ಅಲೆಯುವಂತಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್