ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ 
ದೇಶ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್'ಗೆ ನೋಟಿಸ್ ಜಾರಿ

ನ್ಯಾಷನಲ್ ಹೆರಾಲ್ಡ್ ಅವ್ಯವಹಾರ ಪ್ರಕರಣದ ಪ್ರಮುಖ ಆರೋಪಿಗಳಾದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ದೆಹಲಿ ನ್ಯಾಯಾಲಯ...

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅವ್ಯವಹಾರ ಪ್ರಕರಣದ ಪ್ರಮುಖ ಆರೋಪಿಗಳಾದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ದೆಹಲಿ ನ್ಯಾಯಾಲಯ ಶನಿವಾರ ನೋಟಿಸ್ ಜಾರಿ ಮಾಡಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಇನ್ನೂ ಐವರು ನಾಯಕರ ವಿರುದ್ಧ ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿಯವರು ಗಂಭೀರವಾದ ಆರೋಪವನ್ನು ಮಾಡಿದ್ದರು. ಅವ್ಯವಹಾರದಲ್ಲಿ ಸೋನಿಯಾ, ರಾಹುಲ್, ಮೋತಿಲಾಲ್ ವೋರಾ, ಆಸ್ಕರ್ ಫರ್ನಾಂಡೀಸ್, ಸುಮನ್ ದುಬೆ, ಸ್ಯಾಮ್ ಪಿತ್ರೋಡಾ ಭಾಗಿಯಾಗಿದ್ದಾರೆಂದು ಹೇಳಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸು ಮತ್ತು ವ್ಯವಹಾರಗಳ ಸಚಿವಾಲಯಗಳಿಂದ ದಾಖಲೆಗಳು ಮತ್ತು ಇತರೆ ಸಂಸ್ಥೆ, ಕಾಂಗ್ರೆಸ್ ಪಕ್ಷದ  2010-11ನೇ ಸಾಲಿನ ದಾಖಲೆಗಳನ್ನು ಸಲ್ಲಿಸುವಂತೆ ವಿಚಾರಣಾ ನ್ಯಾಯಾಲಯ ಈ ಹಿಂದೆ ಆದೇಶ ನೀಡಿತ್ತು.

ಇದರಂತೆ ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿರುವ ನ್ಯಾಯಾಲಯವು, ಎರಡು ವಾರಗಳೊಳಗಾಗಿ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಸೋನಿಯಾ, ರಾಹುಲ್ ಮತ್ತು ಐವರು ನಾಯಕರಿಗೆ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಮುಂದಿನ ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಮುಂದೂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ

'ನನ್ನನ್ನಲ್ಲ, ನಿಮ್ ಗಂಡನ ಗುರಾಯಿಸಿ', ಜಯಾ ಬಚ್ಚನ್‌ ಖಡಕ್ ನೋಟಕ್ಕೆ ಫೋಟೋಗ್ರಾಫರ್ ತಿರುಗೇಟು! Video

ಭೀಕರ ಹಿಟ್‌ ಅಂಡ್ ರನ್‌; ಟೀ ಕುಡಿಯುತ್ತಾ ಬೈಕ್ ಮೇಲೆ ಕುಳಿತಿದ್ದವನಿಗೆ ಶಾಕ್ ಕೊಟ್ಟ ಕಾರು, ಗಾಳಿಯಲ್ಲಿ ಹಾರಿದ ವ್ಯಕ್ತಿ! Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ