ಬಿಜೆಪಿ ಸಿಎಂಗಳ ಸಭೆಯನ್ನುದ್ದೇಶಿಸಿ ಮಾತನಾಡಲಿರುವ ಪಿಎಂ ಮೋದಿ 
ದೇಶ

ಬಿಜೆಪಿ ಸಿಎಂಗಳ ಸಭೆಯನ್ನುದ್ದೇಶಿಸಿ ಮಾತನಾಡಲಿರುವ ಪಿಎಂ ಮೋದಿ

ನವದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಉದ್ಘಾಟಿಸಿದ್ದಾರೆ.

ನವದೆಹಲಿ: ನವದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಉದ್ಘಾಟಿಸಿದ್ದಾರೆ.

ಒಳ್ಳೆಯ ಆಡಳಿತ ಹಾಗೂ ಬಡವರ ಅಭಿವೃದ್ಧಿ ವಿಷಯಗಳ ಚರ್ಚೆ ಸಭೆಯ ಪ್ರಧಾನ ಅಂಶವಾಗಿದ್ದು, ಬಿಜೆಪಿ ಆಡಳಿತ ರಾಜ್ಯಗಳ ಮುಖ್ಯಮಂತ್ರಿಗಳು ಒಳ್ಳೆಯ ಆಡಳಿತ ಹಾಗೂ ಬಡವರ ಅಭಿವೃದ್ಧಿಗಾಗಿ ತಮ್ಮ ರಾಜ್ಯಗಳ ಯೋಜನೆಗಳು ಹಾಗೂ ಅದನ್ನು ಕಾರ್ಯರೂಪಕ್ಕೆ ತರುವುದರ ಬಗ್ಗೆ ಮಾತನಾಡಲಿದ್ದಾರೆ. 
ಸಂಜೆ ವೇಳೆಗೆ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಸಿಎಂ ಗಳ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇತ್ತೀಚೆಗಷ್ಟೇ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿರುವ ರಾಜ್ಯಗಳಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳ ಸಿಎಂಗಳ ಸಭೆಯನ್ನು ಆಯೋಜಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!