2009ರಲ್ಲಿ ಶ್ರೀಲಂಕಾ ಕ್ರಿಕೆಟ್ ತಂಡದ ಮೇಲೆ ದಾಳಿ ಮಾಡಿದ್ದ 4 ಉಗ್ರರ ಹತ್ಯೆ (ಸಂಗ್ರಹ ಚಿತ್ರ) 
ದೇಶ

2009ರಲ್ಲಿ ಶ್ರೀಲಂಕಾ ಕ್ರಿಕೆಟ್ ತಂಡದ ಮೇಲೆ ದಾಳಿ ಮಾಡಿದ್ದ 4 ಉಗ್ರರ ಹತ್ಯೆ

2009ರಲ್ಲಿ ಶ್ರೀಲಂಕಾ ಕ್ರಿಕೆಟ್ ತಂಡದ ಮೇಲೆ ದಾಳಿ ಮಾಡಿದ್ದ ಲಷ್ಕರ್-ಇ-ಝಾಂಗ್ವಿ ಉಗ್ರ ಸಂಘಟನೆಗೆ ಸೇರಿದ ನಾಲ್ವರು ಉಗ್ರರನ್ನು ಪಾಕಿಸ್ತಾನ ಪೊಲೀಸರು ಹತ್ಯೆ...

ಲಾಹೋರ್: 2009ರಲ್ಲಿ ಶ್ರೀಲಂಕಾ ಕ್ರಿಕೆಟ್ ತಂಡದ ಮೇಲೆ ದಾಳಿ ಮಾಡಿದ್ದ ಲಷ್ಕರ್-ಇ-ಝಾಂಗ್ವಿ ಉಗ್ರ ಸಂಘಟನೆಗೆ ಸೇರಿದ ನಾಲ್ವರು ಉಗ್ರರನ್ನು ಪಾಕಿಸ್ತಾನ ಪೊಲೀಸರು ಹತ್ಯೆ ಮಾಡಿರುವುದಾಗಿ ಭಾನುವಾರ ತಿಳಿದುಬಂದಿದೆ.

ಲಾಹೋರ್ ನ ಮನವನ್ ಪ್ರದೇಶದಲ್ಲಿದ್ದ ಸಿಐಡಿ ಕಚೇರಿ ಮೇಲೆ 7 ಜನರ ಉಗ್ರರ ಗುಂಪೊಂದು ದಾಳಿ ಮಾಡಿದೆ. ಈ ವೇಳೆ ಭದ್ರತಾ ಸಿಬ್ಬಂದಿಗಳು ದಾಳಿ ನಡೆಸಿ ನಾಲ್ವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಆದರೆ, ಸ್ಥಳದಲ್ಲಿ ಬೆಳಕಿನ ಕೊರತೆಯಿದ್ದರಿಂದ ಉಳಿದ ಮೂವರು ಉಗ್ರರು ತಪ್ಪಿಸಿಕೊಂಡಿದ್ದಾರೆಂದು ಪಂಜಾಬ್ ಸಿಐಡಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸ್ಥಳದಲ್ಲಿ ತೀರಾ ಕತ್ತಲೆಯಿದ್ದರಿಂದ ಉಗ್ರರನ್ನು ಹುಡುಕಲು ಸಾಧ್ಯವಾಗಲಿಲ್ಲ. ಇದನ್ನೇ ಬಳಸಿಕೊಂಡ ಉಗ್ರರು ತಲೆಮರೆಸಿಕೊಂಡಿದ್ದಾರೆ. ತಪ್ಪಿಸಿಕೊಂಡಿರುವ ಉಗ್ರರಿಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಪರಾಧ ತನಿಖಾ ವಿಭಾಗದ ವಕ್ತಾರ ಹೇಳಿದ್ದಾರೆ.

ಹತ್ಯೆಯಾದ ಉಗ್ರರನ್ನು ಜುಬೇರ್ ಅಲಿಯಾಸ್ ನಾಯಕ್ ಮೊಹಮ್ಮದ್, ಅಬ್ದುಲ್ ವಾಹಬ್, ಅದ್ನಾನ್ ಅರ್ಷದ್ ಮತ್ತು ಅಟ್ಟಿಕ್ಯುರ್ ರೆಹ್ಮಾನ್ ಎಂದು ಗುರ್ತಿಸಲಾಗಿದೆ. ಹತ್ಯೆಯಾಗಿರುವ ನಾಲ್ವರೂ ಉಗ್ರರು 2009ರಲ್ಲಿ ಲಾಹೋರ್ ಗೆ ಬಂದಿದ್ದ ಶ್ರೀಲಂಕಾ ಕ್ರಿಕೆಟ್ ತಂಡದ ಮೇಲೆ ದಾಳಿ ಮಾಡಿದ್ದರು ಎಂದು ಸಿಟಿಡಿ ವಕ್ತಾರ ಹೇಳಿದ್ದಾರೆ.

ಉಗ್ರರನ್ನು ಸದೆಬಡಿದ ಬಳಿಕ ಅವರ ಬಳಿದಿದ್ದ ಭಾರೀ ಪ್ರಮಾಣದ ಸ್ಫೋಟಕ ಸಾಮಾಗ್ರಿಗಳು ಹಾಗೂ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

2009ರಲ್ಲಿ ಶ್ರೀಲಂಕಾ ಕ್ರಿಕೆಟ್ ತಂಡದ ಆಟಗಾರರು ಬಸ್ಸೊಂದರಲ್ಲಿ ಸ್ಟೇಡಿಯಂನತ್ತ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಲಷ್ಕರ್-ಇ-ಝಾಂಗ್ವಿ ಉಗ್ರ ಸಂಘಟನೆಗೆ ಸೇರಿದ ಉಗ್ರರ ಗುಂಪೊಂದು ಶಸ್ತ್ರಸಜ್ಜಿತರಾಗಿ ಬಂದು ಆಟಗಾರರ ಮೇಲೆ ಗುಂಡಿನ ದಾಳಿಯನ್ನು ನಡೆಸಿತ್ತು. ಈ ವೇಳೆ ಶ್ರೀಲಂಕಾ ಕ್ರಿಕೆಟ್ ತಂಡದ ನಾಯಕ ಮಹೇಲ ಜಯವರ್ಧನೆ, ಕುಮಾರ ಸಂಗಕ್ಕಾರ, ಅಜಂತಾ ಮೆಂಡಿಸ್, ತಿಲನ್ ಸಮರವೀರ ಮತ್ತು ತರಂಗ ಪರನವಿತನ ಗಾಯಗೊಂಡಿದ್ದರು. ಇದಲ್ಲದೆ, ದಾಳಿ ವೇಳೆ ಕ್ರಿಕೆಟ್ ತಂಡಕ್ಕೆ ಭದ್ರತೆ ನೀಡುತ್ತಿದ್ದ 6 ಪಾಕಿಸ್ತಾನ ಪೊಲೀಸರು ಹಾಗೂ ಹಲವು ನಾಗರೀಕರು ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!