ಸೈಯದ್ ಅಲಿ ಗೀಲಾನಿ 
ದೇಶ

ಪ್ರತ್ಯೇಕವಾದಿ ನಾಯಕ ಗೀಲಾನಿ ಪುತ್ರನಿಗೆ ಎನ್ಐಎ ಸಮನ್ಸ್

ಜಮ್ಮು ಮತ್ತು ಕಾಶ್ಮೀರದಲ್ಲಿನ ಹಿಂಸಾಚಾರದ ಹಿಂದಿರುವ ಹಣದ ಜಾಡಿನ ಬಗ್ಗೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿನ ಹಿಂಸಾಚಾರದ ಹಿಂದಿರುವ ಹಣದ ಜಾಡಿನ ಬಗ್ಗೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಸೋಮವಾರ ಕಾಶ್ಮೀರಿ ಪ್ರತ್ಯೇಕವಾದಿ ನಾಯಕ ಸೈಯದ್ ಅಲಿ ಗೀಲಾನಿ ಅವರ ಪುತ್ರನಿಗೆ ಸಮನ್ಸ್ ಜಾರಿ ಮಾಡಿದೆ.
ಗೀಲಾನಿ ಅವರ ಹಿರಿಯ ಪುತ್ರ ಡಾ.ನಯೀಮ್ ಗೀಲಾನಿಗೆ ಎನ್ಐಎನ್ ನೋಟಿಸ್ ನೀಡಿದ್ದು, ಶ್ರೀನಗರದ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ ಎಂದು ಗೀಲಾನಿ ನೇತೃತ್ವದ ಹುರಿಯತ್ ಕಾನ್ಫೆರೆನ್ಸ್ ವಕ್ತಾರರು ತಿಳಿಸಿದ್ದಾರೆ.
ಕಣಿವೆ ರಾಜ್ಯದ ಹಿಂಸಾಚಾರದ ಹಿಂದಿರುವ ಹಣದ ಜಾಡಿನ ಬಗ್ಗೆ ತನಿಖೆ ನಡೆಸುತ್ತಿರುವ ಎನ್ಐಎ, ಜಮ್ಮು ಮತ್ತು ಕಾಶ್ಮೀರದಲ್ಲಿರುವ ಎಲ್ಲಾ ಬ್ಯಾಂಕ್ ಗಳ ಮತ್ತು ಹಣಕಾಸು ಸಂಸ್ಥೆಗಳಲ್ಲಿನ ಹಣ ವರ್ಗಾವಣೆ ಬಗ್ಗೆ ಮಾಹಿತಿ ಪಡೆದಿದೆ. ಜುಲೈ 9ರ ನಂತರ ಅತಿ ಹೆಚ್ಚು ಹಣ ವರ್ಗಾವಣೆಯಾದ ಅನುಮಾನ್ಸಪದ ಖಾತೆಗಳ ಪಟ್ಟಿ ಸಿದ್ಧಪಡಿಸಿ, ಅವರನ್ನು ವಿಚಾರಣೆಗೆ ಒಳಪಡಿಸುತ್ತಿದೆ.
ಜುಲೈ 8ರಂದು 21 ವರ್ಷದ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಬುಹ್ರಾನ್ ವನಿ ಹತ್ಯೆಯ ನಂತರ ಕಾಶ್ಮೀರದಲ್ಲಿ ನಡೆದ ನಿರಂತರ ಹಿಂಸಾಚಾರದಿಂದಾಗಿ ಇಬ್ಬರು ಪೊಲೀಸ್ ಪೇದೆಗಳು ಸೇರಿದಂತೆ ಕನಿಷ್ಠ 71 ಮಂದಿ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!