ದೇಶ

ಕಾಶ್ಮೀರದಲ್ಲಿ ಮತ್ತೆ ಘರ್ಷಣೆ: ಮತ್ತೊಬ್ಬ ಬಾಲಕ ಸಾವು, ಸಾವಿನ ಸಂಖ್ಯೆ 69ಕ್ಕೆ ಏರಿಕೆ

Lingaraj Badiger
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತಿಭಟನಾಕಾರರ ಮತ್ತು ಭದ್ರತಾ ಪಡೆಗಳ ನಡುವಿನ ಘರ್ಷಣೆ ಮುಂದುವರೆದಿದ್ದು, ಬುಧವಾರ ಹಿಂಸಾತ್ಮಕ ಪ್ರತಿಭಟನೆಯಿಂದಾಗಿ ಉತ್ತಕ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೊರ್ ನಲ್ಲಿ 15 ವರ್ಷದ ಬಾಲಕ ಮೃತಪಟ್ಟಿದ್ದಾನೆ.
ಸೋಪೊರ್ ನಲ ಲೊಡೊರ ಪ್ರದೇಶದಲ್ಲಿ ಕಲ್ಲು ತೂರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಭದ್ರತಾ ಪಡೆ ಗುಂಡು ಹಾರಿಸಿದ ಪರಿಣಾಮ ಓರ್ವ ಮೃತಪಟ್ಟಿದ್ದಾನೆ ಮತ್ತು ಇತರೆ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಇಂದು ಪೊಲೀಸರು ತಿಳಿಸಿದ್ದಾರೆ.
ಮೃತಪಟ್ಟ ಬಾಲಕ ಡ್ಯಾನಿಶ್ ಮಂಜೂರ್ ಎಂದು ಗುರುತಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಡ್ಯಾನಿಶ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಇದರೊಂದಿಗೆ ಕಣಿವೆ ರಾಜ್ಯದಲ್ಲಿ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಮೃತಪಟ್ಟವರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ.
ಶ್ರೀನಗರದ ಎರಡು ಪೊಲೀಸ್ ಠಾಣೆಯ ಪ್ರದೇಶಗಳು ಸೇರಿದಂತೆ ಕಾಶ್ಮೀರದ ಎಲ್ಲಾ ಕಡೆ ಕರ್ಫ್ಯೂ ಅನ್ನು ಹಿಂಪಡೆಯಲಾಗಿದೆ. ಆದರೆ ಸೂಕ್ಷ್ಮ ಪ್ರದೇಶಗಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
SCROLL FOR NEXT