ನಿತೀಶ್ ಕುಮಾರ್ - ಪ್ರಶಾಂತ್ ಕಿಶೋರ್ 
ದೇಶ

9 ಕೋಟಿ ಸಂಭಾವನೆ ಪಡೆದ ಪ್ರಶಾಂತ್‌ ಕಿಶೋರ್ ಎಲ್ಲಿದ್ದಾರೆ? ನಿತೀಶ್ ಕುಮಾರ್ ಗೆ ಬಿಜೆಪಿ ಪ್ರಶ್ನೆ

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ನಿತೀಶ್‌ ಕುಮಾರ್ ಅವರಿಗೆ ಭರ್ಜರಿ ಗೆಲುವು ತಂದುಕೊಟ್ಟಿದ್ದ ಚುನಾವಣಾ ಚಾಣಾಕ್ಷ್ಯ ಹಾಗೂ ಬಿಹಾರ...

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ನಿತೀಶ್‌ ಕುಮಾರ್ ಅವರಿಗೆ ಭರ್ಜರಿ ಗೆಲುವು ತಂದುಕೊಟ್ಟಿದ್ದ ಚುನಾವಣಾ ಚಾಣಾಕ್ಷ್ಯ ಹಾಗೂ ಬಿಹಾರ ಮುಖ್ಯಮಂತ್ರಿಯ ಸಲಹೆಗಾರನಾಗಿ ನೇಮಕಗೊಂಡಿರುವ ಪ್ರಶಾಂತ್‌ ಕಿಶೋರ್‌ ಅವರು ಎಲ್ಲಿದ್ದಾರೆ ಎಂದು ಬಿಹಾರ ಬಿಜೆಪಿ ಬುಧವಾರ ಪ್ರಶ್ನಿಸಿದೆ. 
ಪ್ರಶಾಂತ್ ಕಿಶೋರ್ ಅವರಿಗೆ 9.31 ಕೋಟಿ ರುಪಾಯಿ ಸಂಭಾವನೆ ನೀಡಿ,  2025ರ ಮುನ್ನೋಟ ಸಿದ್ಧಪಡಿಸುವ ಜವಾಬ್ದಾರಿ ನೀಡಲಾಗಿದೆ. ಆದರೆ ಪ್ರಶಾಂತ್‌ ಅವರು ಅತ್ತ ಉತ್ತರ ಪ್ರದೇಶ ಮತ್ತು ಪಂಜಾಬ್‌ನಲ್ಲಿ ಕಾಂಗ್ರೆಸ್‌ಗಾಗಿ ಚುನಾವಣಾ ರಣ ತಂತ್ರ ಹೆಣೆಯುವಲ್ಲಿ ನಿರತರಾಗಿದ್ದು, ಬಿಹಾರದಲ್ಲಿ ತಮ್ಮ ಕರ್ತವ್ಯಕ್ಕೆ ಅವರು ನ್ಯಾಯ ಸಲ್ಲಿಸುತ್ತಿಲ್ಲ ಎಂದು ಬಿಜೆಪಿ ನಾಯಕ ಸುಶೀಲ್‌ ಕುಮಾರ್‌ ಮೋದಿ ಅವರು ಆರೋಪಿಸಿದ್ದಾರೆ. ಅಲ್ಲದೆ ಮುಖ್ಯಮಂತ್ರಿಗಳ ಸಲಹೆಗಾರ ಹುದ್ದೆಯಿಂದಲೂ ಅವರನ್ನು ತೆಗೆಯಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಶಾಂತ್‌ ಕಿಶೋರ್‌ ಅವರು ಮುಖ್ಯಮಂತ್ರಿಗಳ ಸಲಹೆಗಾರ ಹುದ್ದೆಗೆ ರಾಜಿನಾಮೆ ನೀಡಬೇಕು ಇಲ್ಲವೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೇ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿರುವ ಮೋದಿ, ಬಿಹಾರದ ಅಭಿವೃದ್ದಿಗಾಗಿ ಪ್ರಶಾಂತ್ ಕಿಶೋರ್ ಅವರು ಯಾವ ಸಲಹೆ ನೀಡಿದ್ದಾರೆ ಎಂಬುದನ್ನು ನಿತೀಶ್ ಕುಮಾರ್ ರಾಜ್ಯದ ಜನತೆಗೆ ತಿಳಿಸಬೇಕು ಎಂದಿದ್ದಾರೆ.
ಪ್ರಶಾಂತ್‌ ಕಿಶೋರ್‌ ಅವರು ಪ್ರಸ್ತುತ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರುವ ಭಾರೀ ಸವಾಲಿನ ಚುನಾವಣಾ ರಣ ತಂತ್ರವನ್ನು ರೂಪಿಸುವಲ್ಲಿ ನಿರತರಾಗಿದ್ದಾರೆ. 1989ರಿಂದ ಕಾಂಗ್ರೆಸ್‌ ಪಕ್ಷ ಉತ್ತರ ಪ್ರದೇಶವನ್ನು ಆಳಿಲ್ಲ. ಅದೇ ರೀತಿ 2012ರಲ್ಲಿ ಅಕಾಲಿಗಳನ್ನು ಮರಳಿ ಅಧಿಕಾರಕ್ಕೆ ತರಲಾದ ಪಂಜಾಬ್‌ನಲ್ಲಿ ಕೂಡ ಕಾಂಗ್ರೆಸ್‌ ತನ್ನ ನೆಲೆಯನ್ನು ಕಳೆದುಕೊಂಡಿದೆ ಎಂದು ಬಿಜೆಪಿ ಟೀಕಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?