ಟ್ವಿಟರ್ ಖಾತೆಯಷ್ಟೇ ಅಲ್ಲ ಕಾಂಗ್ರೆಸ್ ನ ಹಲವು ನಾಯಕರ ಇ-ಮೇಲ್ ಖಾತೆಗಳೂ ಹ್ಯಾಕ್! 
ದೇಶ

ಟ್ವಿಟರ್ ಖಾತೆಯಷ್ಟೇ ಅಲ್ಲ ಕಾಂಗ್ರೆಸ್ ನ ಹಲವು ನಾಯಕರ ಇ-ಮೇಲ್ ಖಾತೆಗಳೂ ಹ್ಯಾಕ್!

ಕಾಂಗ್ರೆಸ್ ಪಕ್ಷದ ಹಾಗೂ ಅದರ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆ ಹ್ಯಾಕ್ ಆದ ಬೆನ್ನಲ್ಲೇ, ಕಾಂಗ್ರೆಸ್ ನ ಹಲವು ನಾಯಕರ ಇ-ಮೇಲ್ ಖಾತೆಗಳನ್ನೂ ಹ್ಯಾಕ್ ಮಾಡಲಾಗಿದೆ...

ನವದೆಹಲಿ: ಕಳೆದ 24 ಗಂಟೆಗಳಲ್ಲಿ ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷದ ಟ್ವಿಟರ್ ಖಾತೆಗಳನ್ನು ಹಲವು ಬಾರಿ ಹ್ಯಾಕ್ ಮಾಡಲಾಗಿತ್ತು. ಈ ಬಗ್ಗೆ ದೂರು ದಾಖಲಿಸಿದ ಬೆನ್ನಲ್ಲೇ ಈಗ ಪಕ್ಷದ ನಾಯಕರ ಅಧಿಕೃತ ಇ-ಮೇಲ್ ಖಾತೆಯನ್ನೂ ಹ್ಯಾಕ್ ಮಾಡಲಾಗಿದೆಯಂತೆ. 
ಈ ಬಗ್ಗೆ ಮಾಹಿತಿ ನೀಡಿರುವ ಕಾಂಗ್ರೆಸ್ ಪಕ್ಷ, ಹ್ಯಾಕ್ ಆಗಿರುವ ಸಂಬಂಧ ಸೂಕ್ತ ಕ್ರಮ ಜರುಗಿಸುವವರೆಗೂ ಕಾಂಗ್ರೆಸ್ ನಾಯಕರು ಇ-ಮೇಲ್ ಗಳನ್ನು ಬಳಸುವುದಿಲ್ಲ ಎಂದು ಹೇಳಿದೆ.
ಅಲ್ಲದೇ ಟ್ವಿಟರ್ ಖಾತೆ ಹ್ಯಾಕ್ ಆಗಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ರ್ಕಮವಾಗಿ ಕಾಂಗ್ರೆಸ್ ತನಗೆ ಸಂಬಂಧಿಸಿದ ಅಥವಾ ಕಾಂಗ್ರೆಸ್ ನಾಯಕರಿಗೆ ಸಂಬಂಧಿಸಿದ 200 ಟ್ವಿಟರ್ ಖಾತೆಗಳನ್ನು ನಿಷ್ಕ್ರಿಯಗೊಳಿಸಿದೆ ಎಂದು ಸಿಎನ್ ಎನ್-ನ್ಯೂಸ್ 18 ವರದಿ ಮೂಲಕ ತಿಳಿದುಬಂದಿದೆ. 
ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆಗೆ ಕನ್ನ ಹಾಕುವ ಅಥವಾ ಪಕ್ಷದ ನಾಯಕರ ಇ-ಮೇಲ್ ಖಾತೆಗಳನ್ನು ಹ್ಯಾಕ್ ಮಾಡುವಂತಹ ತಂತ್ರಗಳಿಂದ ಜನರ ಸಮಸ್ಯೆಗಳಿಗೆ ಧ್ವನಿಯಾಗುವ ರಾಹುಲ್ ಗಾಂಧಿ ಅವರ ಹೋರಾಟವನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ರಣ್ ದೀಪ್ ಸುರ್ಜೇವಾಲ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್