ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ, ಬಿಎಸ್ಎಫ್ ಯೋಧನಿಗೆ ಗಾಯ
ಪಾಕಿಸ್ತಾನ ಶುಕ್ರವಾರ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಜಮ್ಮು ಮತ್ತು ಕಾಶ್ಮೀರದ ರಾಜೋರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ...
ಜಮ್ಮು: ಪಾಕಿಸ್ತಾನ ಶುಕ್ರವಾರ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಜಮ್ಮು ಮತ್ತು ಕಾಶ್ಮೀರದ ರಾಜೋರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಓರ್ವ ಬಿಎಸ್ಎಫ್ ಯೋಧ ಗಾಯಗೊಂಡಿದ್ದಾರೆ.
ರಾಜೋರಿ ಜಿಲ್ಲೆಯ ಭಿಂಭೇರ್ ಗಾಲಿ ಸೆಕ್ಟರ್ ನಲ್ಲಿ ಇಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ಪಾಕ್ ಸೇನೆ ನಡೆಸಿದ ಒಂದು ಸುತ್ತಿನ ಗುಂಡಿನ ದಾಳಿಯಲ್ಲಿ ಬಿಎಸ್ ಎಫ್ ಪೇದೆ ಗಾಯಗೊಂಡಿದ್ದಾರೆ ಎಂದು ಬಿಎಸ್ಎಫ್ ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಾಯಗೊಂಡ ಯೋಧನ ಸ್ಥಿತಿ ಸ್ಥಿರವಾಗಿದೆ ಎಂದು ಅವರು ಹೇಳಿದ್ದಾರೆ.
ನವೆಂಬರ್ 23ರಂದು ನೌಶೆರ್ ಮತ್ತು ಮಂಜಕೋಟೆ ಹಾಗೂ ಬಾಲಕೋಟೆ ಸೆಕ್ಟರ್ ನಲ್ಲಿ ಪಾಕ್ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಆರು ಯೋಧರು ಸೇರಿದಂತೆ ಒಟ್ಟು 11 ಮಂದಿ ಗಾಯಗೊಂಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.