ನರೇಂದ್ರ ಮೋದಿ 
ದೇಶ

ಜಿಯೋ ಜಾಹಿರಾತಿನಲ್ಲಿ ಪ್ರಧಾನಿ ಮೋದಿ ಫೋಟೋ ಬಳಕೆಗೆ ಪ್ರಧಾನಿ ಕಚೇರಿ ಅನುಮತಿ ನೀಡಿರಲಿಲ್ಲ

ಜಿಯೋ ಜಾಹಿರಾತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಬಳಸಿಕೊಳ್ಳಲು ಪ್ರಧಾನಮಂತ್ರಿ ಕಚೇರಿಯು ಅನುಮತಿ ನೀಡಿರಲಿಲ್ಲ ಎಂದು ಕೇಂದ್ರ...

ನವದೆಹಲಿ: ಜಿಯೋ ಜಾಹಿರಾತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಬಳಸಿಕೊಳ್ಳಲು ಪ್ರಧಾನಮಂತ್ರಿ ಕಚೇರಿಯು ಅನುಮತಿ ನೀಡಿರಲಿಲ್ಲ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ರಾಜವರ್ಧನ್ ಸಿಂಗ್ ರಾಥೋರ್ ತಿಳಿಸಿದ್ದಾರೆ. 
ಸಮಾಜವಾದಿ ಪಕ್ಷದ ನೀರಜ್ ಶೇಖರ್ ಅವರು ರಾಜ್ಯಸಭೆಯಲ್ಲಿ ಈ ಕುರಿತು ಪ್ರಶ್ನೆ ಎತ್ತಿದರು. ಇದಕ್ಕೆ ಉತ್ತರಿಸಿದ ಜಿಯೋ ಜಾಹಿರಾತಿನಲ್ಲಿ ಮೋದಿ ಅವರ ಭಾವಚಿತ್ರ ಬಳಿಸಿಕೊಂಡಿರುವ ವಿಷಯ ನನ್ನ ಗಮನಕ್ಕೂ ಬಂದಿದೆ. ಆದರೆ ಮೋದಿ ಅವರ ಭಾವಚಿತ್ರ ಬಳಿಸಿಕೊಳ್ಳಲು ಕಚೇರಿ ಅನುಮತಿ ನೀಡಿರಲಿಲ್ಲ ಎಂದು ಹೇಳಿದರು. 
ಇನ್ನು 1950ರ ಲಾಂಛನ ಮತ್ತು ಹೆಸರುಗಳ ದುರ್ಬಳಕೆ ತಡೆ ಕಾಯ್ದೆಯಡಿ ಜಿಯೋ ಕಂಪನಿ ವಿರುದ್ಧ ಕ್ರಮಕೈಗೊಳ್ಳುತ್ತೀರ ಎಂದು ನೀರಜ್ ಶೇಖರ್ ಕೇಳಿದ್ದು ಇದಕ್ಕೆ ರಾಥೋರ್ ಲಾಂಛನ ಮತ್ತು ಹೆಸರುಗಳ ದುರ್ಬಳಕೆ ತಡೆ ಕಾಯ್ದೆಯಡಿ ಕ್ರಮ ಕೈಗೊಳ್ಳುವ ಅಧಿಕಾರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವಾಲಯಕ್ಕಿದೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!