ದೇಶ

ಕೋಲ್ಕತಾ ಶಾಪಿಂಗ್ ಮಾಲ್ ನಲ್ಲಿ ಅಗ್ನಿ ಅವಘಡ

Manjula VN

ಕೋಲ್ಕತಾ: ಕೋಲ್ಕತಾದ ಶಾಪಿಂಗ್ ಮಾಲ್ ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ದೌಡಾಯಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.

ಇಂದು ಬೆಳಗ್ಗೆ ಶಾಪಿಂಗ್ ಮಾಲ್ ನ್ನು ತೆರೆಯುವ ವೇಳೆ ಬೆಂಕಿ ಅವಘಡ ಸಂಭವಿಸಿದೆ. ಕೂಡಲೇ ಸ್ಥಳದಲ್ಲಿದ್ದ ಜನರನ್ನು ತೆರವುಗೊಳಿಸಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ 5 ಅಗ್ಮಿ ಶಾಮಕ ದಳದ ವಾಹನಗಳು, ಅಧಿಕಾರಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.

ಮಾಲ್ ನ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದೀಗ ಬೆಂಕಿ ನಿಯಂತ್ರಣಕ್ಕೆ ಬಂದಿದ್ದು, ಯಾವುದೇ ಸಾವು-ನೋವುಗಳು ಸಂಭವಿಸಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ.

SCROLL FOR NEXT