ಅಮೃತ್ ಸರ: ಪಂಜಾಬ್ ನ ಅಮೃತ್ ಸರದಲ್ಲಿ ನಡೆಯುತ್ತಿರುವ ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಭಾಗಿಯಾಗಲು ಭಾರತಕ್ಕೆ ಆಗಮಿಸಿರುವ ಪಾಕಿಸ್ತಾನ ಪ್ರಧಾನಿ ಸಲಹೆಗಾರ ಸರ್ತಾಜ್ ಅಜೀಜ್ ಸುಷ್ಮಾ ಸ್ವರಾಜ್ ಅವರಿಗೆ ಪುಷ್ಪಗುಚ್ಛ ಕಳಿಸಿಕೊಟ್ಟಿದ್ದು ಶೀಘ್ರವೇ ಗುಣಮುಖರಾಗುವಂತೆ ಶುಭ ಕೋರಿದ್ದಾರೆ.
ಭಾರತಕ್ಕೆ ಆಗಮಿಸಿದ ಸರ್ತಾಜ್ ಅಜೀಜ್ ಅವರನ್ನು ಪಾಕಿಸ್ತಾನದ ಹೈಕಮಿಷನರ್ ಅಬ್ದುಲ್ ಬಸಿತ್ ಬರಮಾಡಿಕೊಂಡಿದ್ದಾರೆ, ಭಾರತಕ್ಕೆ ಆಗಮಿಸಿದ ಬೆನ್ನಲ್ಲೇ ಪಾಕ್ ಪ್ರತಿನಿಧಿ ಸುಷ್ಮಾ ಸ್ವರಾಜ್ ಅವರಿಗೆ ಪುಷ್ಪಗುಚ್ಛ ಕಳಿಸಿಕೊಟ್ಟು ಶೀಘ್ರವೇ ಅನಾರೋಗ್ಯದಿಂದ ಗುಣಮುಖರಾಗುವಂತೆ ಶುಭ ಕೋರಿದ್ದಾರೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದೆ.
ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಸುಷ್ಮಾ ಸ್ವರಾಜ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅನಾರೋಗ್ಯದ ಕಾರಣ ಸುಷ್ಮಾ ಸ್ವರಾಜ್ ಹಾರ್ಟ್ ಆಫ್ ಏಷ್ಯಾ ಸಮ್ಮೇಳನಕ್ಕೆ ಗೈರು ಹಾಜರಾಗಿದ್ದಾರೆ.