ಕೇಂದ್ರ ಸಚಿವ ಎಂ.ವೆಂಕಯ್ಯ ನಾಯ್ಡು ನಿನ್ನೆ ಚೆನ್ನೈನ ಅಪೊಲೊ ಆಸ್ಪತ್ರೆಗೆ ಭೇಟಿ ನೀಡಿ ಜಯಲಲಿತಾ ಅವರ ಅಂತಿಮ ದರ್ಶನ ಪಡೆದರು. 
ದೇಶ

ಸಿಎಂ ಜಯಲಲಿತಾ ನಿಧನ: ತಮಿಳುನಾಡಿನಲ್ಲಿ ಅಘೋಷಿತ ಬಂದ್ ಸ್ಥಿತಿ ನಿರ್ಮಾಣ

ತಮಿಳುನಾಡು ರಾಜ್ಯಾದ್ಯಂತ ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ...

ಚೆನ್ನೈ: ತಮಿಳುನಾಡು ರಾಜ್ಯಾದ್ಯಂತ ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ರಾಜ್ಯ ಗೃಹ ಇಲಾಖೆ ಮತ್ತು ಪೊಲೀಸ್ ಇಲಾಖೆ ತೀವ್ರ ಬಂದೋಬಸ್ತ್ ಏರ್ಪಡಿಸಿದೆ. ಇಂದು ಬೆಳಗ್ಗೆಯಿಂದಲೇ ಅಂಗಡಿ-ಮುಂಗಟ್ಟುಗಳು, ಪೆಟ್ರೋಲ್ ಬಂಕ್ ಗಳು ಮುಚ್ಚಿವೆ. ಚೆನ್ನೈ ನಗರದಲ್ಲಿ ಇಂದು ನೀರವ ಮೌನ ಕಾಡುತ್ತಿದೆ. ರಸ್ತೆಗಳೆಲ್ಲಾ ಖಾಲಿ ಖಾಲಿಯಾಗಿವೆ.
ನಿನ್ನೆ ಸಂಜೆ ಸ್ಥಳೀಯ ಚಾನೆಲ್ ಗಳು ಜಯಲಲಿತಾ ಸಾವಿನ ಸುದ್ದಿಯನ್ನು ಬಿತ್ತರಿಸಿದಾಗ ಅಪೊಲೊ ಆಸ್ಪತ್ರೆಯ ಮುಂದೆ ಹಿಂಸಾಚಾರ ಆರಂಭಗೊಂಡಿತು. ಸಾವಿರಾರು ಸಂಖ್ಯೆಯಲ್ಲಿ ಜನರು ಆಸ್ಪತ್ರೆಯ ಬ್ಯಾರಿಕೇಡ್ ಗಳನ್ನು ಮುರಿದು ಒಳಗೆ ನುಗ್ಗಲು ಯತ್ನಿಸಿದವು. ಆಗ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಬೇಕಾಗಿ ಬಂತು. 
ಎಡಿಎಂಕೆ ಪಕ್ಷದ ಕೇಂದ್ರ ಕಚೇರಿಯಲ್ಲಿ ಧ್ವಜವನ್ನು ಅರ್ಧಕ್ಕೆ ಇಳಿಸಲಾಯಿತು. ಸ್ಥಳೀಯ ಚಾನೆಲ್ ಗಳು ಬಿತ್ತರಿಸಿದ ಸುದ್ದಿ ಸುಳ್ಳು ಮತ್ತು ಆಧಾರರಹಿತ, ಜಯಲಲಿತಾ ಅವರು ಬದುಕುಳಿಯುವ ಆಶಾವಾದವಿದೆ. ಅವರಿಗೆ ಕೃತಕ ಉಸಿರಾಟ ನೀಡಲಾಗುತ್ತಿದೆ ಎಂದು ಅಪೊಲೊ ಆಸ್ಪತ್ರೆ ಪ್ರಕಟಿಸಿದಾಗ ಜನರು ಮತ್ತಷ್ಟು ಉದ್ರಿಕ್ತರಾದರು. 
ರಾಜ್ಯ ಸರ್ಕಾರ ಬಂದ್ ಘೋಷಿಸದಿದ್ದರೂ ತಮಿಳುನಾಡಿನಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!