ನವದೆಹಲಿ: ತಮಿಳುನಾಡು ಸಿಎಂ ಜಯಲಲಿತಾ ಅವರ ನಿಧನಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸಂತಾಪ ಸೂಚಿಸಿದ್ದು, ಜೀವನದ ಕೊನೆಯ ವರೆಗೂ ಅದಮ್ಯ ಧೈರ್ಯದಿಂದಲೇ ಹೋರಾಟ ನಡೆಸಿಕೊಂಡು ಬಂದಿದ್ದರು ಎಂದು ಬಣ್ಣಿಸಿದ್ದಾರೆ.
"ಅನಾರೋಗ್ಯದೊಂದಿಗೆ ಹೋರಾಡಿದಂತೆಯೇ ಜಯಲಲಿತಾ ತಮ್ಮ ಜೀವನದ ಹಲವು ಮಜಲುಗಳಲ್ಲಿ ಎದುರಾದ ಸಂಕಷ್ಟಗಳನ್ನೂ ಧೈರ್ಯವಾಗಿ ಎದುರಿಸಿದ್ದರು, ಜಯಲಲಿತಾ ಅವರ ನಿಧನದ ವಾರ್ತೆ ದುಃಖ ಉಂಟು ಮಾಡಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.
ನಾಲ್ಕು ಬಾರಿ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದ ಜಯಲಲಿತಾ ಅಲ್ಲಿನ ಜನರ ಸಮಸ್ಯೆಗಳನ್ನು ಅರಿತು, ಜನರ ನಿರೀಕ್ಷೆಗಳನ್ನು ಈಡೇರಿಸಿದ್ದರು, ಜಯಲಲಿತಾ ನಿಜವಾಗಿಯೂ ಓರ್ವ ಅತ್ಯುತ್ತಮ ಆಡಳಿತಗಾರರಾಗಿದ್ದರು, ಕಾಂಗ್ರೆಸ್ ಪಕ್ಷ ಹಾಗೂ ತಮಗೆ ಜಯಲಲಿತಾ ಅವರ ನಿಧನದ ವಾರ್ತೆ ತೀವ್ರ ದುಃಖ ಉಂಟುಮಾಡಿದೆ ಎಂದು ಸೋನಿಯಾ ಗಾಂಧಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.