ವಾಜಪೇಯಿ ಮತ್ತು ಜಯಲಲಿತಾ 
ದೇಶ

ಒಂದೇ ಒಂದು ವೋಟಿನಿಂದ ವಾಜಪೇಯಿ ಸರ್ಕಾರ ಕೆಡವಿದ್ದ ಜಯಲಲಿತಾ

1998ರ ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಧಾನ ಗೆದ್ದಿದ್ದ ಜಯ ಕಿಂಗ್ ಮೇಕರ್ ಆಗಿದ್ದರು. ವಾಜಪೇಯಿ ಸರ್ಕಾರಕ್ಕೆ ಬೆಂಬಲ ನೀಡಿ ಕೇಂದ್ರದಲ್ಲಿ ಬಿಜೆಪಿ ...

ಚೆನ್ನೈ: ಭಾರತದ ರಾಜಕೀಯದಲ್ಲಿ ವರ್ಣರಂಜಿತ ವ್ಯಕ್ತಿತ್ವದ ನಾಯಕಿಯೆಂದು ಗುರುತಿಸಿಕೊಂಡಿದ್ದ ಜಯಲಲಿತಾ ಈಗ ಇತಿಹಾಸ.

1998ರ ಲೋಕಸಭೆ ಚುನಾವಣೆಯಲ್ಲಿ  ಅತಿ ಹೆಚ್ಚು ಸ್ಧಾನ ಗೆದ್ದಿದ್ದ ಜಯ ಕಿಂಗ್ ಮೇಕರ್ ಆಗಿದ್ದರು. ವಾಜಪೇಯಿ ಸರ್ಕಾರಕ್ಕೆ ಬೆಂಬಲ ನೀಡಿ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲು ಜಯಲಲಿತಾ ಕಾರಣವಾಗಿದ್ದರು. 1999ರ ಏಪ್ರಿಲ್ 17ರಂದು ನಡೆದ ವಿಶ್ವಾಸಮತ ಯಾಚನೆಗಿಂತ ರೋಚಕ ಘಟನೆ ಮತ್ತೂಂದು ಇರಲಿಕ್ಕಿಲ್ಲ.

ಪದೇ ಪದೇ ಬೆಂಬಲ ಹಿಂತೆಗೆದುಕೊಳ್ಳುವುದಾಗಿ ಬೆದರಿಕೆ ಒಡ್ಡುತ್ತಿದ್ದ ಜಯಲಲಿತಾ 13 ತಿಂಗಳ ಅಟಲ್‌ ಬಿಹಾರಿ ವಾಜಪೇಯಿ ನೇತೃತ್ವದ ಬಿಜೆಪಿ ಸರ್ಕಾರ ಕೇವಲ 1 ಮತದಿಂದ ಅಧಿಕಾರ ಕಳೆದು ಕೊಳ್ಳುವಂತೆ ಮಾಡಿದರು. ಹೀಗೆ ಸರ್ಕಾರವನ್ನು ಬೀಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಎಐಎಡಿಎಂಕೆ ನಾಯಕಿ ಜಯಲಲಿತಾ.

ಕೇಂದ್ರ ಸರ್ಕಾರ ತನ್ನ ಬೇಡಿಕೆಯನ್ನು ಒಪ್ಪಲಿಲ್ಲ ಎಂಬ ಕಾರಣಕ್ಕೆ ಅವರು ಕೇಂದ್ರ ಸರ್ಕಾರವನ್ನೇ ಉರುಳಿಸಿದರು. ಇನ್ನೊಂದು ವಿಶೇಷವೆಂದರೆ ಅಂದು ಬಿಜೆಪಿ ಸರ್ಕಾರ ಬೀಳಲು ಕಾರಣವಾದವರಲ್ಲಿ ಜಯಲಲಿತಾ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದ ಬಿಜೆಪಿ ಸಂಸದರಾಗಿರುವ ಸುಬ್ರಮಣಿಯನ್‌ ಸ್ವಾಮಿ ಒಬ್ಬರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!