ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಪನ್ನೀರ್ ಸೆಲ್ವಂ (ಸಂಗ್ರಹ ಚಿತ್ರ) 
ದೇಶ

ತಮಿಳುನಾಡು ಮುಖ್ಯಮಂತ್ರಿಯಾಗಿ ಪನ್ನೀರ್ ಸೆಲ್ವಂ ಪ್ರಮಾಣವಚನ ಸ್ವೀಕಾರ

ಹೃದಯಾಘಾತಕ್ಕೊಳಗಾಗಿ ಜೆ. ಜಯಲಲಿತಾ ಅವರು ಇಹಲೋಕ ತ್ಯಜಿಸಿರುವ ಹಿನ್ನಲೆಯಲ್ಲಿ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಒ.ಪನ್ನೀರ್ ಸೆಲ್ವಂ ಅವರು ಸೋಮವಾರ ತಡರಾತ್ರಿ ಪ್ರಮಾಣ ವಚನವನ್ನು ಸ್ವೀಕರಿಸಿದ್ದಾರೆ...

ಚೆನ್ನೈ: ಹೃದಯಾಘಾತಕ್ಕೊಳಗಾಗಿ ಜೆ. ಜಯಲಲಿತಾ ಅವರು ಇಹಲೋಕ ತ್ಯಜಿಸಿರುವ ಹಿನ್ನಲೆಯಲ್ಲಿ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಒ.ಪನ್ನೀರ್ ಸೆಲ್ವಂ ಅವರು ಸೋಮವಾರ ತಡರಾತ್ರಿ ಪ್ರಮಾಣ ವಚನವನ್ನು ಸ್ವೀಕರಿಸಿದ್ದಾರೆ.

ತಮಿಳುನಾಡಿನ ರಾಜಭವನದಲ್ಲಿರುವ ರಾಜಾಜಿ ಹಾಲ್ ನಲ್ಲಿ ಸೋಮವಾರ ತಡರಾತ್ರಿ 1.20 ನಡೆದ ಸರಳ ಕಾರ್ಯಕ್ರಮದಲ್ಲಿ ಪನ್ನೀರ್ ಸೆಲ್ವಂ ಮತ್ತು 31 ನೂತನ ಸಚಿವರು ಪ್ರಮಾಣವಚನವನ್ನು ಸ್ವೀಕರಿಸಿದ್ದಾರೆ.

ಈ ಹಿಂದೆ ಜಯಲಲಿತಾ ಸಂಪುಟದಲ್ಲಿ ಸಚಿವರಾಗಿದ್ದವರೇ ಮತ್ತೆ ಸಚಿವರಾಗಿ ಪ್ರಮಾಣವಚನವನ್ನು ಸ್ವೀಕರಿಸಿದ್ದಾರೆ. ತಮಿಳುನಾಡು ರಾಜ್ಯ ಉಸ್ತುವಾರಿ ರಾಜ್ಯಪಾಲ ಸಿ. ವಿದ್ಯಾಸಾಗರ್ ರಾವ್ ಅವರು ಸಚಿವರಿಗೆ ಪ್ರಮಾಣವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಕಾರ್ಯದರ್ಶಿ ಪಿ.ರಾಮಮೋಹನ್ ರಾವ್ ಮತ್ತು ತಮಿಳುನಾಡು ರಾಜ್ಯ ಸರ್ಕಾರದ ಸಲಹೆಗಾರರಾದ ಶೀಲಾ ರಾಮಕೃಷ್ಣನ್ ಸೇರಿದಂತೆ ಜಯಲಲಿತಾ ಅವರ ಕೆಲವೇ ಆಪ್ತರು ಹಾಜರಿದ್ದರು ಎಂದು ತಿಳಿದುಬಂದಿದೆ.

ಇದಕ್ಕೂ ಮೊದಲು ನಡೆದ ಎಐಎಡಿಎಂಕೆ ಶಾಸಕಾಂಗ ಸಭೆಯಲ್ಲಿ ಒ. ಪನ್ನೀರ್ ಸೆಲ್ವಂ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿತ್ತು. ಜಯಲಲಿತಾ ಅವರ ಆಪ್ತರಾಗಿದ್ದ ಪನ್ನೀರ್ ಸೆಲ್ವಂ ಅವರು ಈ ಹಿಂದೆಯೂ ಕೂಡ 2 ಬಾರಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು. ಇದೀಗ ಮೂರನೇ ಬಾರಿಗೆ ಪ್ರಮಾಣವಚನವನ್ನು ಸ್ವೀಕರಿಸಿದ್ದಾರೆ.
 
ಪ್ರಮಾಣವಚನ ಸ್ವೀಕಾರ ಸಮಾರಂಭದ ಬಳಿಕ ಆಸ್ಪತ್ರೆಗೆ ದೌಡಾಯಿಸಿದ ನೂತನ ಸಿಎಂ

ಪ್ರಮಾಣವಚನ ಸ್ವೀಕಾರ ಸಮಾರಂಭ ಮುಕ್ತಾಯವಾಗುತ್ತಿದ್ದಂತೆಯೇ ಕಣ್ಣೀರು ಹಾಕಿದ ಪನ್ನೀರ್ ಸೆಲ್ವಂ ಅವರು ಜಯಲಲಿತಾ ಅವರ ಪಾರ್ಥೀವ ಶರೀರವಿರುವ ಅಪೋಲೋ ಆಸ್ಪತ್ರೆಯತ್ತ ದೌಡಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!