ಹಿರೋಷಿಮಾ ಘಟನೆಗೆ ಒಬಾಮ ಕ್ಷಮೆ ಕೇಳಲಿಲ್ಲ, ಪರ್ಲ್ ಹಾರ್ಬರ್ ದಾಳಿಗೆ ಜಪಾನ್ ಪ್ರಧಾನಿಯೂ ಕೇಳುವುದಿಲ್ಲ
ಡಿ.26-27 ರಂದು ಜಪಾನ್ ಪ್ರಧಾನಿ ಶಿಂಜೋ ಅಬೆ ಪರ್ಲ್ ಹಾರ್ಬರ್ ಗೆ ಭೇಟಿ ನೀಡುತ್ತಿದ್ದು ಅಲ್ಲಿಗೆ ಭೇಟಿ ನೀಡಿದ ಮೊದಲ ಜಪಾನ್ ಪ್ರಧಾನಿಯಾಗಲಿದ್ದಾರೆ.
ಟೋಕಿಯೋ: ಡಿ.26-27 ರಂದು ಜಪಾನ್ ಪ್ರಧಾನಿ ಶಿಂಜೋ ಅಬೆ ಪರ್ಲ್ ಹಾರ್ಬರ್ ಗೆ ಭೇಟಿ ನೀಡುತ್ತಿದ್ದು ಅಲ್ಲಿಗೆ ಭೇಟಿ ನೀಡಿದ ಮೊದಲ ಜಪಾನ್ ಪ್ರಧಾನಿಯಾಗಲಿದ್ದಾರೆ.
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರೊಂದಿಗೆ ಮಾತುಕತೆ ನಡೆಸುವುದಕ್ಕಾಗಿ ಹವಾಯಿ ದ್ವೀಪಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಪರ್ಲ್ ಹಾರ್ಬರ್ ಗೆ ಭೇಟಿ ನೀಡಿ ಹುತಾತ್ಮ ಯೋಧರ ಸ್ಮಾರಕಗಳಿಗೆ ಗೌರವ ಸಲ್ಲಿಸಲಿದ್ದಾರೆ. ಆದರೆ 1941 ರ ಡಿ.7 ರಂದು ಜಪಾನ್ ಅಮೆರಿಕ ನೌಕಾ ಪಡೆ ಮೇಲೆ ನಡೆಸಿದ ದಾಳಿಗೆ ಕ್ಷಮೆ ಕೋರುವುದಿಲ್ಲ ಎಂದು ತಿಳಿದುಬಂದಿದೆ.
ಇದಕ್ಕೂ ಮುನ್ನ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಜಪಾನ್ ನ ಹಿರೋಷಿಮಾ ನಗರಕ್ಕೆ ಭೇಟಿ ನೀಡಿದ್ದರು. ಆದರೆ ಅಮೆರಿಕ ಹಿರೋಷಿಮಾ ನಾಗಸಾಕಿ ನಗರಗಳ ಮೇಲೆ ನಡೆಸಿದ್ದ ಅಣುದಾಳಿಗೆ ಕ್ಷಮೆ ಕೋರಲು ನಿರಾಕರಿಸಿದ್ದರು. ಈಗ ಪರ್ಲ್ ಹಾರ್ಬರ್ ಗೆ ಭೇಟಿ ನೀಡುತ್ತಿರುವ ಜಪಾನ್ ನ ಪ್ರಧಾನಿಯೂ ಸಹ ಕ್ಷಮೆ ಕೋರಲು ನಿರಾಕರಿಸಿದ್ದಾರೆ ಎನ್ನಲಾಗುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.