ದೆಹಲಿ: ಯುವತಿ ಶವದೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಯಮುನಾ ನದಿ ತೀರದ ದಡದಲ್ಲಿ ಯುವತಿ ದೇಹ ಪತ್ತೆಯಾಗಿತ್ತು. ಸ್ವಲ್ಪ ಸಮಯದ ನಂತರ ಸರಾಯಿ ಕಾಲೆ ಖಾನ್ ಬಸ್ ನಿಲ್ದಾಣದಲ್ಲಿ ಅದೇ ಯುವತಿ ಶವ ಸಿಕ್ಕಿತ್ತು.
ಪಾದಾಚಾರಿಯೊಬ್ಬರು ಈ ಘಟನೆಯನ್ನು ಪೊಲೀಸರಿಗೆ ತಿಳಿಸಿದ್ದಾರೆ. ನಂತರ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ವಿಚಾರಣೆ ನಡೆಸಿದಾಗ ಆತ ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸುವ (ನೆಕ್ರೋ ಫಿಲಿಯಾ) ಎಂಬ ಕಾಯಿಲೆಯಿಂದ ಬಳಲುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ.