ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ
ಚೆನ್ನೈ: ಪೌಷ್ಟಿಕತೆ ಮತ್ತು ಹೈಡ್ರೇಷನ್ ನಿರ್ಜಲೀಕರಣ(ಹೈಡ್ರೇಶನ್) ಸಮಸ್ಯೆಯಿಂದ ವಾರದ ಹಿಂದೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಗುರುವಾರ ಬಿಡುಗಡೆಗೊಂಡಿದ್ದಾರೆ.
ಮಾದಕ ವಸ್ತು ಪ್ರಚೋದಿತ ಅಲರ್ಜಿಯಿಂದ 93 ವರ್ಷದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಡಿಸೆಂಬರ್ 1ರಂದು ಕೌವೇರಿ ಆಸ್ಪತ್ರೆಗೆ ದಾಖಲಾಗಿದ್ದರು.
ಚಿಕಿತ್ಸೆ ಬಳಿಕ ಹಂತಹಂತವಾಗಿ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಂಡರು ಎಂದು ಆಸ್ಪತ್ರೆಯ ಕಾರ್ಯಕಾರಿ ನಿರ್ದೇಶಕ ಡಾ.ಎಸ್.ಅರವಿಂದನ್ ತಿಳಿಸಿದ್ದಾರೆ.
ಅವರಿಗೆ ವಿಶ್ರಾಂತಿ ಸೂಚಿಸಲಾಗಿದ್ದು, ಮನೆಯಲ್ಲಿ ಅವರಿಗೆ ಅಗತ್ಯ ವೈದ್ಯಕೀಯ ಮತ್ತು ಶುಶ್ರೂಷೆ ಮುಂದುವರಿಸಲಾಗುವುದು ಎಂದು ವೈದ್ಯರು ಹೇಳಿದ್ದಾರೆ. ಅನಾರೋಗ್ಯದಿಂದಾಗಿ ಕಳೆದ ಒಂದು ತಿಂಗಳಿನಿಂದ ಕರುಣಾನಿಧಿಯವರು ಸಾರ್ವಜನಿಕ ಚಟುವಟಿಕೆಗಳಿಂದ ದೂರವುಳಿದಿದ್ದರು.