ಆಮ್ ಆದ್ಮಿ ಪಕ್ಷದ ಸಂಸದ ಭಗವಂತ್ ಮನ್ 
ದೇಶ

ಭದ್ರತೆ ವಿಡಿಯೋ ಪ್ರಕರಣ; ಭಗವಂತ್ ಮನ್ ಅಮಾನತುಗೊಳಿಸಲು ಸಂಸತ್ ಸಮಿತಿ ಶಿಫಾರಸು

ಸಂಸತ್ತಿನ ಭದ್ರತಾ ವ್ಯವಸ್ಥೆಯನ್ನು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಸಂಸದ ಭಗವಂತ್ ಮನ್ ಅವರನ್ನು ಅಮಾನತಿನಲ್ಲಿಡಲು ಸಂಸತ್ ಸಮಿತಿ ಗುರುವಾರ...

ನವದೆಹಲಿ: ಸಂಸತ್ತಿನ ಭದ್ರತಾ ವ್ಯವಸ್ಥೆಯನ್ನು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಸಂಸದ ಭಗವಂತ್ ಮನ್ ಅವರನ್ನು ಅಮಾನತಿನಲ್ಲಿಡಲು ಸಂಸತ್ ಸಮಿತಿ ಗುರುವಾರ ಶಿಫಾರಸು ಮಾಡಿದೆ ಎಂದು ಮೂಲಗಳಿಂದ ತಿಳಿಬಂದಿದೆ.

ವಿಡಿಯೋ ಕುರಿತಂತೆ ತನಿಖೆ ನಡೆಸಿರುವ ಸಂಸತ್ ಸಮಿತಿ ಮನ್ ಭಗವಂತ್ ಮನ್ ಅವರನ್ನು ಅಮಾನತಿನಲ್ಲಿಡುವಂತೆ ಶಿಫಾರಸು ಮಾಡಿದ್ದು, ಚಳಿಗಾಲದ ಅಧಿವೇಶನದಲ್ಲಿ ಭಾಗಿಯಾಗದಂತೆ ಅಮಾನತುಗೊಳಿಸುವಂತೆ ತಿಳಿಸಿದೆ ಎಂದು ಹೇಳಲಾಗುತ್ತಿದೆ.

ಆಪ್ ಸಂಸದ ಭಗವಂತ್ ಮನ್ ಅವರು ಸಂಸತ್ತಿನ ಭದ್ರತಾತ ವ್ಯವಸ್ಥೆಯನ್ನು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದರು. ಈ ಪ್ರಕರಣ ಸಂಸತ್ತಿನಲ್ಲಿ ಸಾಕಷ್ಟು ಕೋಲಾಹಲವನ್ನು ಎಬ್ಬಿಸಿತ್ತು. ಸಾಕಷ್ಟು ವಿರೋಧ ವ್ಯಕ್ತವಾದ ಬಳಿಕ ಭಗವಂತ್ ಮನ್ ಅವರು, ಸಂಸತ್ತಿನಲ್ಲಿ ಬೇಷರತ್ ಕ್ಷಮೆಯಾಚಿಸಿದ್ದರು. ಆದರೆ ಈ ಕ್ಷಮೆಯನ್ನು ಒಪ್ಪದ ಸರ್ವ ಸದಸ್ಯರು ಮನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರು.

ಸಂಸತ್ ಭದ್ರತಾ ನಿಯಮಗಳನ್ನು ಉಲ್ಲಂಘಿಸಿ ನಡೆಸಿರುವ ಚಿತ್ರೀಕರಣದ ಕುರಿತಂತೆ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು, ಕಿರೀಟ್ ಸೋಮಯ್ಯ ನೇತೃತ್ವದ ಸಮಿತಿ ರಚಿಸಿ ತನಿಖೆ ನಡೆಸಲು ಸೂಚಿಸಿದ್ದರು.

ಇದರಂತೆ ತನಿಖೆ ನಡೆಸಿರುವ ಕಿರೀಟ್ ಸೋಮಯ್ಯ ನೇತೃತ್ವದ ಸಮಿತಿ, ಭಗವಂತ್ ಮನ್ ಅವರನ್ನು ಅಮಾನತಿನಲ್ಲಿಡುವಂತೆ ಶಿಫಾರಸ್ಸು ಮಾಡಿದೆ. ಸಮಿತಿಯ ಶಿಫಾರಸ್ಸಿನಂತೆ ನಾಳೆ ನಡೆಯಲಿರುವ ಕಲಾಪದಲ್ಲಿ ಸಂಸತ್ ನಿರ್ಣಯ ಕೈಗೊಳ್ಳಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

SCROLL FOR NEXT