ರಾಷ್ಟ್ರಪತಿ ಪ್ರಣಬ್ ಮುಖರ್ಜಿ 
ದೇಶ

ನೋಟು ನಿಷೇಧಕ್ಕೆ ಅಧಿವೇಶನ ಬಲಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಸಮಾಧಾನ

ನೋಟು ನಿಷೇಧ ಕುರಿತಂತೆ ಕಳೆದ ಮೂರು ವಾರಗಳಿಂದಲೂ ಸಂಸತ್ ಕಲಾಪಕ್ಕೆ ವಿರೋಧ ಪಕ್ಷಗಳು ಅಡ್ಡಿಯುಂಟು ಮಾಡಿರುವುದಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಗುರುವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ನೋಟು ನಿಷೇಧ ಕುರಿತಂತೆ ಕಳೆದ ಮೂರು ವಾರಗಳಿಂದಲೂ ಸಂಸತ್ ಕಲಾಪಕ್ಕೆ ವಿರೋಧ ಪಕ್ಷಗಳು ಅಡ್ಡಿಯುಂಟು ಮಾಡಿರುವುದಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಗುರುವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರ ನೋಟು ನಿಷೇಧ ನಿರ್ಧಾರಕ್ಕೆ ಅಧಿವೇಶನ ಬಲಿಯಾಗುತ್ತಿರುವುದರ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ನೋಟು ನಿಷೇಧ ಕುರಿತಂತೆ ವಿರೋಧ ಪಕ್ಷಗಳು ಸಂಸತ್ ಕಲಾಪಕ್ಕೆ ಪದೇಪದೇ ಅಡ್ಡಿಪಡಿಸುವುದು ಸ್ವೀಕಾರಾರ್ಹವಲ್ಲ. ಬಹುಮತ ಹೊಂದಿರುವ ಸರ್ಕಾರದ ಮೇಲೆ ವಿರೋಧ ಪಕ್ಷಗಳು ಒತ್ತಡ ಹೇರುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಸಂಸತ್ತು ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳುವುದು ಸರ್ಕಾರದ ಕರ್ತವ್ಯವಾಗಿದ್ದು, ಸಂಸದರೇ.. ನೀವು ನಿಮ್ಮ ಕರ್ತವ್ಯವನ್ನು ನಿರ್ವಹಿಸಿ ಎಂದು ಹೇಳಿದ್ದಾರೆ.  

ಮತದಾರರು ಸಂಸತ್ತಿನಲ್ಲಿ ಚರ್ಚೆ ನಡೆಸಲು ನಿಮ್ಮನ್ನು ಜನಪ್ರತಿನಿಧಿಗಳಾಗಿ ಕಳುಹಿಸಿದ್ದಾರೆಯೇ ವಿನಃ ಸಂಸತ್ ಕಲಾಪಕ್ಕೆ ಅಡ್ಡಿಪಡಿಸುವ ಸಲುವಾಗಿ ಅಲ್ಲ. ಇತ್ತೀಚಿನ ದಿನಗಳಲ್ಲಿ ಸಂಸತ್ತು ಕಲಾಪಕ್ಕೆ ಅಡ್ಡಿಯುಂಟು ಮಾಡುವುದು ಹವ್ಯಾಸವಾಗಿ ಹೋಗಿದೆ.

ಪ್ರತಿಭಟನೆ ಹಾಗೂ ಧರಣಿಗಳನ್ನು ಎಲ್ಲಿ ಬೇಕಾದರೂ ಮಾಡಬಹುದು. ಸಂಸತ್ತಿನಲ್ಲಿ ಸಂಸದರು ಸಾರ್ವಜನಿಕ ಪ್ರಾಮುಖ್ಯತೆಯುಳ್ಳ ವಿಷಯಗಳ ಬಗ್ಗೆ ಚರ್ಚೆ ನಡೆಸಬೇಕಿದೆ. ನಾನು ಪ್ರತ್ಯೇಕವಾಗಿ ಯಾವುದೇ ರಾಜಕೀಯ ಪಕ್ಷವನ್ನು ಟೀಕಿಸುತ್ತಿಲ್ಲ. ಎಲ್ಲರೂ ಕೈಜೋಡಿಸಿ ಸಂಸತ್ತು ಸರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡಬೇಕಿದೆ ಎಂದು ತಿಳಿಸಿದ್ದಾರೆ.
ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!