ಸಾಂದರ್ಭಿಕ ಚಿತ್ರ 
ದೇಶ

ಕೇರಳ: ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ್ದ ಪಾದ್ರಿಗೆ 'ಡಬಲ್' ಜೀವಾವಧಿ ಶಿಕ್ಷೆ!

ಕೊಚ್ಚಿಯಲ್ಲಿರುವ ಲೌರ್ಡ್ಸ್ ಚರ್ಚ್ ನ ಪಾದ್ರಿ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾಗಿದ್ದು, ಎರ್ನಾಕುಲಂ ನ್ಯಾಯಾಲಯ ಆತನಿಗೆ ಎರಡು ಅವಧಿಯ ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಿದೆ.

ಕೊಚ್ಚಿ: ಕೊಚ್ಚಿಯಲ್ಲಿರುವ ಲೌರ್ಡ್ಸ್ ಚರ್ಚ್ ನ ಪಾದ್ರಿ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾಗಿದ್ದು, ಎರ್ನಾಕುಲಂ ನ್ಯಾಯಾಲಯ ಆತನಿಗೆ ಎರಡು ಅವಧಿಯ ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಿದೆ. 
ಪಾದ್ರಿ ವಿರುದ್ಧ 14 ವರ್ಷದ ಬಾಲಕಿಯನ್ನು ಹಲವು ಬಾರಿ ಅತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿತ್ತು. ಪ್ರಕರಣದ ಬಗ್ಗೆ ತೀರ್ಪು ನೀಡಿರುವ ನ್ಯಾಯಾಲಯ ಧರ್ಮ ಗುರು ತನ್ನ ಸ್ಥಾನವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದಿರುವ ನ್ಯಾಯಾಲಯ, ಚರ್ಚ್ ಮೇಲಿರುವ ನಂಬಿಕೆಗಳನ್ನು ಘಾಸಿಗೊಳಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ. 
ಎಡ್ವಿನ್ ಪಿಗಾರೆಜ್‌ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಆರೋಪಿಯಾಗಿದ್ದು, ಪಾದ್ರಿಗೆ ಕೇರಳ ಹೈಕೋರ್ಟ್‌ ಜಾಮೀನು ನೀಡಲು ನಿರಾಕರಿಸಿದ ಸಂದರ್ಭದಲ್ಲಿ ತಪ್ಪಿಸಿಕೊಳ್ಳಲು ನೆರವು ನೀಡಿದ್ದಕ್ಕೆ ಅವರ ಸಹೋದರ ಸಿಲ್ವೆಸ್ಟರ್‌ ಪಿಗಾರೆಜ್‌ಗೆ ಕೋರ್ಟ್‌ ಒಂದು ವರ್ಷ ಸಾದಾ ಶಿಕ್ಷೆ ವಿಧಿಸಿದೆ. ಬಾಲಕಿ ಚರ್ಚ್‌ಗೆ ಪ್ರಾರ್ಥನೆ ಸಲ್ಲಿಸಲು ಬರುತ್ತಿದ್ದ ಸಂದರ್ಭದಲ್ಲಿ ಪಾದ್ರಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ತಾಯಿ ಪೊಲೀಸರಿಗೆ ದೂರು ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!