ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕುಡಿದ ಅಮಲಿನಲ್ಲಿ ಎಟಿಎಂ ಸಾಲಿನ ಮೇಲೆ ಕಾರು ನುಗ್ಗಿಸಿದ ಚಾಲಕ; 15 ಮಂದಿಗೆ ಗಾಯ

ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಕಾರು ಚಲಾಯಿಸಿ ಎಟಿಎಂ ಮುಂದೆ ಸಾಲಿನಲ್ಲಿ ನಿಂತಿದ್ದ ಜನರಿಗೆ ಗುದ್ದಿದ ಪರಿಣಾಮ 15 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಸೊಲಾಪುರ ಜಿಲ್ಲೆಯಲ್ಲಿ...

ಸಾಂದರ್ಭಿಕ ಚಿತ್ರ
Manjula VN
Updated On : 9 Dec 2016, 7:34 am

ಸೊಲಾಪುರ: ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಕಾರು ಚಲಾಯಿಸಿ ಎಟಿಎಂ ಮುಂದೆ ಸಾಲಿನಲ್ಲಿ ನಿಂತಿದ್ದ ಜನರಿಗೆ ಗುದ್ದಿದ ಪರಿಣಾಮ 15 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಸೊಲಾಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.

ಸೊಲಾಪುರ-ಬಿಜಾಪುರದ ಅತಾರ್ ಪ್ರದೇಶದ ರಸ್ತೆಯಲ್ಲಿರುವ ಎಟಿಎಂ ಬಳಿ ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ 500ಕ್ಕೂ ಹೆಚ್ಚು ಮಂದಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ ರಭಸದಿಂದ ಬಂದಿರುವ ಮಾರುತಿ ಕಾರೊಂದು ಏಕಾಏಕಿ ಜನರಿಗೆ ಗುದ್ದಿದೆ. ಈ ವೇಳೆ 15 ಮಂದಿ ಗಾಯಗೊಂಡಿದ್ದು, ಗಾಯಗೊಂಡವರ 15 ಜನರ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಕಾರು ಚಾಲಕನನ್ನು ಸುಭಾಷ್ ಚಾವನ್ ಎಂದು ಹೇಳಲಾಗುತ್ತಿದ್ದು, ಈತ ಸ್ಥಳೀಯ ರಾಜಕಾರಣೆಯಾಗಿದ್ದಾನೆಂದು ತಿಳಿದುಬಂದಿದೆ.

ಸುದ್ದಿ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಚಾಲಕನನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆತ ಮದ್ಯಪಾನ ಮಾಡಿ ವಾಹನ ಚಲಾಯಿಸಿರುವುದ ಬೆಳಕಿಗೆ ಬಂದಿದೆ. ಪ್ರಸ್ತುತ ಚಾಲಕನ್ನು ಬಂಧನಕ್ಕೊಳಪಡಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement