ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ 
ದೇಶ

ಕಲಾಪಕ್ಕೆ ಅಡ್ಡಿಪಡಿಸಿದಕ್ಕಾಗಿ ಪ್ರತಿಪಕ್ಷಗಳು ಕ್ಷಮೆಯಾಚಿಸಬೇಕು: ಅನಂತ್ ಕುಮಾರ್

ಸಂಸತ್ತಿನ ಕಲಾಪಕ್ಕೆ ಅಡ್ಡಿಯುಂಟು ಮಾಡಿದ ಕಾರಣಕ್ಕೆ ಪ್ರತಿಪಕ್ಷಗಳು ಕೂಡಲೇ ಜನತೆ ಬಳಿ ಕ್ಷಮೆಯಾಚಿಸಬೇಕಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್...

ನವದೆಹಲಿ: ಸಂಸತ್ತಿನ ಕಲಾಪಕ್ಕೆ ಅಡ್ಡಿಯುಂಟು ಮಾಡಿದ ಕಾರಣಕ್ಕೆ ಪ್ರತಿಪಕ್ಷಗಳು ಕೂಡಲೇ ಜನತೆ ಬಳಿ ಕ್ಷಮೆಯಾಚಿಸಬೇಕಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ.

ಸಂಸತ್ತಿನಲ್ಲಿ ಕಲಾಪ ಆರಂಭವಾದಾಗಿನಿಂದಲೂ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ. ಚರ್ಚೆ ನಡೆಸಲು ಅವಕಾಶ ಮಾಡಿಕೊಂಡು ಎಂದು ವಿರೋಧ ಪಕ್ಷಗಳ ಬಳಿ ಮನವಿ ಮಾಡಿಕೊಂಡು ಬರುತ್ತಲೇ ಇದ್ದೇವೆ. ಚರ್ಚೆಯಲ್ಲಿ ಭಾಗಿಯಾಗಿ ನಿಮ್ಮ ಅಭಿಪ್ರಾಯ ಹಾಗೂ ಅನಿಸಿಕೆಗಳನ್ನು ವ್ಯಕ್ತಪಡಿಸಿ ಎಂದು ಹೇಳಿದ್ದೇವೆ. ಆದರೆ, ವಿರೋಧ ಪಕ್ಷಗಳು ಚರ್ಚೆ ನಡೆಯಲು ಬಿಡದೆ, ಚರ್ಚೆಯಿಂದ ಹಿಂದೆ ಸರಿಯುತ್ತಿವೆ ಎಂದು ಹೇಳಿದ್ದಾರೆ.

ಕಳೆದ 15 ದಿನಗಳಿಂದಲೂ ಕಾಂಗ್ರೆಸ್ ಹಾಗೂ ಕಮ್ಯುನಿಸ್ಟ್ ಪಕ್ಷ, ತೃಣಮೂಲಕ ಕಾಂಗ್ರೆಸ್ ಹಾಗೂ ಇನ್ನಿತರೆ ರಾಜಕೀಯ ಪಕ್ಷಗಳು ಕಲಾಪಕ್ಕೆ ಅಡ್ಡಿಯುಂಟು ಮಾಡಿ, ಅಧಿವೇಶನ ನಾಶಗೊಳ್ಳುವಂತೆ ಮಾಡಿದ್ದಾರೆ. ಇದೀಗ ದಿಢೀರನೇ ಎದ್ದುಬಂದು ಚರ್ಚೆ ನಡೆಸಲು ಸಿದ್ಧವಿದ್ದೇವೆಂದು ಹೇಳುತ್ತಿವೆ.

ತೆಲಂಗಾಣ ರಾಷ್ಟ್ರ ಸಮಿತಿ ಏರ್ಪಡಿಸಿದ್ದ ಚರ್ಚೆಯಲ್ಲಿಯೂ ಕಾಂಗ್ರೆಸ್ ಪಕ್ಷ ಅಡಚಣೆಯನ್ನುಂಟು ಮಾಡಿತ್ತು. ಸಂಸತ್ತಿನ ನಿಯಮಗಳನ್ನು ಮುರಿಯುವುದೇ ಕಾಂಗ್ರೆಸ್ ಪ್ರಮುಖ ಆದ್ಯತೆಯಾಗಿದ್ದು, ನಿನ್ನೆ ಕೂಡ ಸಂಸತ್ತಿನಲ್ಲಿ ಕಪ್ಪುದಿನವನ್ನು ಆಚರಿಸುವ ಮೂಲಕ ಕಲಾಪಕ್ಕೆ ಅಡ್ಡಿಯುಂಟು ಮಾಡಿತ್ತು. ಸಂಸತ್ತು ಕಲಾಪಕ್ಕೆ ಅಡ್ಡಿಯುಂಟು ಮಾಡಿದ ಕಾರಣಕ್ಕೆ ಕಾಂಗ್ರೆಸ್ ಪಕ್ಷ, ಕಮ್ಯುನಿಸ್ಟ್ ಪಕ್ಷ ಮತ್ತು ತೃಣಮೂಲಕ ಕಾಂಗ್ರೆಸ್ ಪಕ್ಷಗಳು ದೇಶದ ಜನತೆಯ ಬಳಿ ಕ್ಷಮೆಯಾಚಿಸಬೇಕಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ