ಸುಪ್ರೀಂ ಕೋರ್ಟ್ 
ದೇಶ

ರಾಷ್ಟ್ರಗೀತೆಗೆ ಸಂಬಂಧಿಸಿದ ಆದೇಶ ಮಾರ್ಪಡಿಸಿದ ಸುಪ್ರೀ ಕೋರ್ಟ್, ವಿಕಲಚೇತನರಿಗೆ ವಿನಾಯಿತಿ

ಸುಪ್ರೀಂ ಕೋರ್ಟ್ ರಾಷ್ಟ್ರಗೀತೆಗೆ ಸಂಬಂಧಿಸಿದ ತನ್ನ ಆದೇಶವನ್ನು ಶುಕ್ರವಾರ ಮಾರ್ಪಡಿಸಿದ್ದು, ವಿಕಲಚೇತನರಿಗೆ ದೇಶಾದ್ಯಂತ...

ನವದೆಹಲಿ: ಸುಪ್ರೀಂ ಕೋರ್ಟ್ ರಾಷ್ಟ್ರಗೀತೆಗೆ ಸಂಬಂಧಿಸಿದ ತನ್ನ ಆದೇಶವನ್ನು ಶುಕ್ರವಾರ ಮಾರ್ಪಡಿಸಿದ್ದು, ವಿಕಲಚೇತನರಿಗೆ ದೇಶಾದ್ಯಂತ ಚಿತ್ರಮಂದಿರಗಳಲ್ಲಿ ಎದ್ದುನಿಂತು ರಾಷ್ಟ್ರಗೀತೆ ಹಾಡುವುದರಿಂದ ವಿನಾಯಿತಿ ನೀಡಲಾಗಿದೆ.
ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಮೂರ್ತಿ ಅಮಿತವ್ ರಾಯ್ ಅವರನ್ನೊಳಗೊಂಡ ಪೀಠ, ವಿಕಲಚೇತನರು ಕುಳಿತುಕೊಂಡೆ ರಾಷ್ಟ್ರಗೀತೆಗೆ ಗೌರವ ಸಲ್ಲಿಸಬಹುದಾಗಿದೆ ಎಂದು ಹೇಳಿದೆ. ಅಲ್ಲದೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಹಾಡುವ ವೇಳೆ ಬಾಗಿಲುಗಳನ್ನು ಮುಚ್ಚಬೇಕಾಗದ ಅಗತ್ಯ ಇಲ್ಲ ಎಂದು ಸ್ಪಷ್ಟಪಡಿಸಿದೆ.
ಸರ್ಕಾರದ ಪರ ವಿಚಾರಣೆಗೆ ಹಾಜರಾಗಿದ್ದ ಅಟರ್ನಿ ಜನರಲ್ ಮುಕುಲ್ ರೊಹಟ್ಗಿ ಅವರು, ವಿಕಲಚೇತನರು ರಾಷ್ಟ್ರಗೀತೆಗೆ ಯಾವ ರೀತಿ ಗೌರವ ಸಲ್ಲಿಸಬೇಕು ಎಂಬುದರ ಬಗ್ಗೆ ಮುಂದಿನ 10 ದಿನಗಳಲ್ಲಿ ಕೇಂದ್ರ ಮಾರ್ಗಸೂಚಿಗಳನ್ನು ಹೊರಡಿಸಲಿದೆ ಎಂದು ಕೋರ್ಟ್ ಗೆ ತಿಳಿಸಿದರು. ಬಳಿಕ ಕೋರ್ಟ್ ವಿಚಾರಣೆಯನ್ನು ಫೆಬ್ರವರಿ 14ಕ್ಕೆ ಮುಂದೂಡಿದೆ.
ದೇಶಾದ್ಯಂತ ಎಲ್ಲಾ ಚಿತ್ರಮಂದಿರಗಳಲ್ಲೂ ಸಿನಿಮಾ ಆರಂಭವಾಗುವ ಮುನ್ನ ರಾಷ್ಟ್ರಗೀತೆಯನ್ನು ಕಡ್ಡಾಯವಾಗಿ ಹಾಡಬೇಕು ಎಂದು ಕಳೆದ ಡಿಸೆಂಬರ್ 1ರಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?